ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಪ್ರಯುಕ್ತ ‘ಪುಷ್ಪ 2’ ಹಾಗೂ 'ದಿ ಗರ್ಲ್ಫ್ರೆಂಡ್' ಚಿತ್ರದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಗಿದೆ.
‘ಪುಷ್ಪ 2’ ಚಿತ್ರದ ಎಕ್ಸ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಪೋಸ್ಟರ್ನಲ್ಲಿ ರಶ್ಮಿಕಾ, ಸೀರೆ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಜತೆಗೆ ಸಾಕಷ್ಟು ಆಭರಣ ತೊಟ್ಟುಕೊಂಡಿದ್ದಾರೆ.
ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ ಎಂದೂ ಪೋಸ್ಟರ್ನಲ್ಲಿ ಬರೆಯಲಾಗಿದೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆ ಅಲ್ಲು ಅರ್ಜುನ್ ತೆರೆ ಹಂಚಿಕೊಂಡಿದ್ದಾರೆ.
'ದಿ ಗರ್ಲ್ಫ್ರೆಂಡ್ ' ಚಿತ್ರ ತಂಡ ಕೂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಶ್ಮಿಕಾ ಅವರಿಗೆ ವಿಶೇಷವಾಗಿ ಶುಭ ಕೋರಿದೆ.
ಸದ್ಯ ರಶ್ಮಿಕಾ ಮಂದಣ್ಣ ಅವರು ಹುಟ್ಟು ಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.