ADVERTISEMENT

ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ನಿಧನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 5:38 IST
Last Updated 6 ಜನವರಿ 2023, 5:38 IST
ಗೋಪಾಲಕೃಷ್ಣ ನಾಯರಿ
ಗೋಪಾಲಕೃಷ್ಣ ನಾಯರಿ    

ಮಂಗಳೂರು: ಕನ್ನಡ ರಂಗಭೂಮಿಯ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68) ಅವರು ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ನಾಯರಿ ನಗರದ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪತ್ನಿ, ಹಾಗೂ ಮಗಳು ಇದ್ದಾರೆ.

ಉಡುಪಿ ಜಿಲ್ಲೆಯ ಸಾಲಿಗ್ರಾಮದ ಕಾರ್ಕಡದಲ್ಲಿ ಅವರು ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ನಾಯರಿ ಅವರು ಎನ್‌ಎಸ್‌ಡಿಯಲ್ಲಿ ತರಬೇತಿ ಪಡೆದು ಮರಳಿದ ಬಳಿಕ ನಾಗೇಶ್ ನಿರ್ದೇಶನದ ತಾಮ್ರಪತ್ರ ನಾಟಕದಲ್ಲಿ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದರು.

ನಂತರ ಗಂಗಾಧರ ಸ್ವಾಮಿ ನಿರ್ದೇಶನದಲ್ಲಿ ಸಮುದಾಯದಲ್ಲಿ ಕೊಂದು ಕೂಗಿತ್ತು ನೋಡಾ ನಾಟಕದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

ಬೆಂಗಳೂರು ಮತ್ತು ತುಮಕೂರಿನ ನಾಟಕ ಮನೆ ಜೊತೆಗೆ ಗಾಢ ಸಂಬಂಧ ಇಟ್ಟುಕೊಂಡಿದ್ದ ನಾಯರಿ, ಭಾಸ ನ ನಾಟಕಗಳಿಗೆ
ಹೆಸರುವಾಸಿಯಾಗಿದ್ದರು.

ಬೆಂಗಳೂರಿನ‌ ಎನ್‌ಎಸ್‌ಡಿಗೆ ಕೆಲವು ಕಾರ್ಯಾಗಾರಗಳನ್ನು ಮತ್ತು ನಾಟಕಗಳನ್ನೂ ನಿರ್ದೇಶನ ಮಾಡಿದ್ದರು.

ಬಹಳ ಗಂಭೀರ ಸ್ವಭಾವದ ನಾಯರಿ, ಕನ್ನಡ ರಂಗಭೂಮಿಯಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದ್ದ ಒಬ್ಬ ಶ್ರೇಷ್ಠ ವ್ಯಕ್ತಿತ್ವದ ರಂಗ ನಿರ್ದೇಶಕ, ನಟ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.