ಕಡತ
(ಸಾಂದರ್ಭಿಕ ಚಿತ್ರ)
ಮಂಗಳೂರು: ಪುರಂದರದಾಸರು ರಚಿಸಿದ್ದ ‘ಅನಸೂಯಾಚರಿತ್ರೆ’ ಎಂಬ ಯಕ್ಷಗಾನವನ್ನು ಈಚೆಗೆ ಯಕ್ಷಗಾನದ ಸಂಶೋಧಕ ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಸಂಶೋಧಿಸಿದ್ದು, ಇದನ್ನು ಕಾಸರಗೋಡಿನ ‘ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ’ವು ಪ್ರಕಟಿಸಿದೆ.
ಅಕ್ಟೋಬರ್ 18ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕೃತಿ ಬಿಡುಗಡೆ ನಡೆಯಲಿದೆ ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.