ಬೆಂಗಳೂರು: ಕಿರುತೆರೆ ನಟ ಹಾಗೂಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತಿಯಾಗಿದ್ದ ನಟ ಗೋವಿಂದೇಗೌಡಗೆ ಅಪಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಸಂಜೆ ಚಿತ್ರೀಕರಣ ಸಮಯದಲ್ಲಿ ಗೋವಿಂದೇಗೌಡಗೆ ಅಪಘಾತವಾಗಿದೆ. ಕೂಡಲೇ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕಗೋವಿಂದೇಗೌಡ ಖ್ಯಾತಿಯಾಗಿದ್ದರು. ಹಲವು ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.