ADVERTISEMENT

BBK: ಬಿಗ್ ಬಾಸ್‌ಗೆ ಅಧಿಕೃತ ವಿದಾಯ ಘೋಷಿಸಿದ ನಟ ಸುದೀಪ್- ಭಾವುಕ ಪೋಸ್ಟ್

ನಟ ಸುದೀಪ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜನವರಿ 2025, 3:14 IST
Last Updated 20 ಜನವರಿ 2025, 3:14 IST
<div class="paragraphs"><p>ನಟ ಸುದೀಪ್</p></div>

ನಟ ಸುದೀಪ್

   

ಬೆಂಗಳೂರು: ನಟ ಸುದೀಪ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ.

ಈ ಬಗ್ಗೆ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬಿಗ್ ಬಾಸ್ ಬಗ್ಗೆ ಭಾವುಕ ಮಾತುಗಳನ್ನು ಆಡಿದ್ದಾರೆ.

ADVERTISEMENT

ಬಿಗ್ ಬಾಸ್‌ನ ಕಳೆದ ಎಲ್ಲ 11 ಸೀಸನ್‌ಗಳನ್ನು ನಾನು ತುಂಬಾ ಆನಂದಿಸಿದ್ದೇನೆ. ನನ್ನ ಮೇಲೆ ಪ್ರೀತಿ ಇಟ್ಟು ನನ್ನನ್ನು ಬೆಂಬಲಿಸಿದ ನಿಮ್ಮೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಈ ಸೀಸನ್‌ನ ಫಿನಾಲೆಯೇ ನನ್ನ ಬಿಗ್‌ಬಾಸ್‌ನ ಕೊನೆ ಹೆಜ್ಜೆ ಎಂದು ಹೇಳಿದ್ದಾರೆ.

ಬಿಗ್ ಬಾಸ್ ನನಗೆ ಒಂದು ಅದ್ಭುತ ಹಾಗೂ ಅವಿಸ್ಮರಣಿಯ ಪಯಣವಾಗಿತ್ತು. ಸಾಧ್ಯವಾದಷ್ಟು ಮಟ್ಟಿಗೆ ಶೋಗೆ ನ್ಯಾಯ ಒದಗಿಸಿ ನಿಮ್ಮನ್ನು ರಂಜಿಸಿದ್ದೇನೆ. ಇನ್ನೂ ಮುಂದೆಯೂ ರಂಜಿಸುತ್ತೇನೆ. ಅವಕಾಶ ಕೊಟ್ಟಿದ್ದ ಕಲರ್ಸ್ ಕನ್ನಡಕ್ಕೂ ನಾನು ಋಣಿಯಾಗಿದ್ದೇನೆ ಎಂದು ಹೇಳಿದ್ದಾರೆ.

ನಟ ಸುದೀಪ್ ಅವರ ನಿರೂಪಣೆಯಿಂದ ಬಿಗ್ ಬಾಸ್ ಶೋ ಸಾಕಷ್ಟು ಪ್ರೇಕ್ಷಕರನ್ನು ಹಾಗೂ ಅಭಿಮಾನಿಗಳನ್ನು ಸಂಪಾದಿಸಿದೆ.

ಶನಿವಾರ ಬಿಗ್‌ ಬಾಸ್‌ ಫಿನಾಲೆಯ ಟ್ರೋಫಿಯನ್ನು ಅನಾವರಣ ಮಾಡಲಾಗಿದೆ. ಬರುವ ಭಾನುವಾರ ಫಿನಾಲೆ ನಡೆಯಲಿದೆ ಎನ್ನಲಾಗಿದೆ.

ಈ ವಾರಾಂತ್ಯ ಗೌತಮಿ ಮನೆಯಿಂದ ಹೊರಹೋಗಿದ್ದು, ಭಾನುವಾರದ ಸಂಚಿಕೆಯಲ್ಲಿ ಧನರಾಜ್‌ ಆಚಾರ್‌ ಹೊರಹೋಗಿದ್ದಾರೆ. ಫಿನಾಲೆಗೆ ಹನುಮಂತು, ತ್ರಿವಿಕ್ರಮ್ ಮತ್ತು ಮೋಕ್ಷಿತಾ ಆಯ್ಕೆಯಾಗಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.