ರೋಷನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ
ಬೆಂಗಳೂರು: ಜನಪ್ರಿಯ ನಿರೂಪಕಿ ಅನುಶ್ರೀ ಅವರು ಬಹುಕಾಲದ ಗೆಳೆಯ ರೋಷನ್ ಅವರೊಂದಿಗೆ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಅನುಶ್ರೀ ಅವರ ಮದುವೆಗೆ ಚಂದನವನದ ಅನೇಕ ನಟ–ನಟಿಯರು ಸಾಕ್ಷಿಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ಧನಂಜಯ್, ನವ ದಂಪತಿಗೆ ಶುಭ ಹಾರೈಸಿದ್ದಾರೆ.
ಧನಂಜಯ್, ನಟಿ ಚೈತ್ರಾ ಆಚಾರ್, ನಾಗಭೂಷಣ್ ಸೇರಿ ಹಲವರು ಸೆಲ್ಫಿ ತೆಗೆದುಕೊಂಡಿದ್ದಾರೆ.
ಉಳಿದಂತೆ ಶಿವರಾಜ್‌ಕುಮಾರ್ ದಂಪತಿ, ಶರಣ್, ಪ್ರೇಮಾ, ಹಂಸಲೇಖ, ಶ್ವೇತಾ ಚಂಗಪ್ಪ, ವಿಜಯ್ ರಾಘವೇಂದ್ರ, ನೆನಪಿರಲಿ ಪ್ರೇಮ್, ರಾಜ್ ಬಿ. ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ರೋಷನ್ ಅವರು ಉದ್ಯಮಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.