ADVERTISEMENT

BBK 11 ಗ್ರ್ಯಾಂಡ್ ಫಿನಾಲೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 19:15 IST
Last Updated 24 ಜನವರಿ 2025, 19:15 IST
   

 ಬಿಗ್‌ ಬಾಸ್‌ ಕನ್ನಡ ಸೀಸನ್ 11ರ ಗ್ರ್ಯಾಂಡ್‌ ಫಿನಾಲೆಗೆ ಇನ್ನೂ ಕೇವಲ ಒಂದೇ ದಿನ ಮಾತ್ರ ಬಾಕಿಯಿದೆ. ಇದೀಗ ದೊಡ್ಮನೆಯಲ್ಲಿ 6 ಮಂದಿ ಸ್ಪರ್ಧಿಗಳಿದ್ದು, ಈ ಪೈಕಿ ವಿನ್ನರ್ ಯಾರಾಗಲಿದ್ದಾರೆ ಎಂದು ವೀಕ್ಷಕರಲ್ಲಿ ಕುತೂಹಲ ಕೆರಳಿಸಿದೆ.

ಮೊದಲಿಗೆ ಡೈರೆಕ್ಟ್‌ ಟಿಕೆಟ್‌ ಟು ಫಿನಾಲೆ ವಾರಕ್ಕೆ ಹನುಮಂತು ಎಂಟ್ರಿ ಕೊಟ್ಟಿದ್ದರು. ಬಳಿಕ ಮೋಕ್ಷಿತಾ ಪೈ, ತ್ರಿವಿಕ್ರಮ್​ ಆಯ್ಕೆಯಾಗಿದ್ದರು. ಇನ್ನು ಕಳೆದ ಭಾನುವಾರದ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ನಾಮಿನೇಷನ್​ ಸ್ಥಾನದಲ್ಲಿದ್ದ ಉಗ್ರಂ ಮಂಜು, ಭವ್ಯ ಗೌಡ ಹಾಗೂ ರಜತ್​ ಸೇಫ್​ ಆಗಿ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಶನಿವಾರ (ಜನವರಿ 25) ಹಾಗೂ ಭಾನುವಾರ (ಜನವರಿ 26) ಫಿನಾಲೆ ನಡೆಯಲಿದೆ. ಪ್ರತಿ ದಿನ ಎಪಿಸೋಡ್ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿತ್ತು. ವೀಕೆಂಡ್ ಸಂಚಿಕೆ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿತ್ತು. ಆದರೆ, ಫಿನಾಲೆ ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಯಿಂದ ಪ್ರಸಾರವಾಗಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.