ರಾಮನಗರ: ಅನಧಿಕೃತವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಆರೋಪದ ಮೇಲೆ, ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಷೋ ನಡೆಯುತ್ತಿರುವ ತಾಲ್ಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಎಂಟರ್‌ಟೈನ್‌ಮೆಂಟ್ ಪಾರ್ಕ್‌ಗೆ ತಹಶೀಲ್ದಾರ್ ತೇಜಸ್ವಿನಿ ಅವರು ಮಂಗಳವಾರ ಬೀಗ ಹಾಕಿದರು.
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪಾರ್ಕ್‌ಗೆ ನೋಟಿಸ್ ನೀಡಿದ ಬೆನ್ನಲ್ಲೇ, ತಾಲ್ಲೂಕು ಆಡಳಿತ ಈ ಕ್ರಮ ಕೈಗೊಂಡಿದೆ. ಅಲ್ಲದೆ, ಬಿಗ್ ಬಾಸ್ ಷೋ ಕೂಡ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ, ಷೋ ಅತಂತ್ರ ಸ್ಥಿತಿ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.