
ಕನ್ನಡದ ಬಿಗ್‌ಬಾಸ್ ಮನೆಯ ಕಳ್ಳಪುಟ್ಟಿ
ಚಿತ್ರ: ಇನ್‌ಸ್ಟಾಗ್ರಾಂ
ಕನ್ನಡದ ಬಿಗ್‌ಬಾಸ್ ಸೀಸನ್ 12ರ ಸ್ಪರ್ಧಿಯಾಗಿದ್ದ ನಟಿ ಸ್ಪಂದನಾ ಸೋಮಣ್ಣ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಬಿಗ್‌ಬಾಸ್ ಮನೆಯ ‘ಕಳ್ಳಪುಟ್ಟಿ’ ಎಂದೇ ಖ್ಯಾತಿ ಪಡೆದುಕೊಂಡಿರುವ ಸ್ಪಂದನಾ ಸೋಮಣ್ಣ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಜ. 22ರಂದು ನಟಿ ಸ್ಪಂದನಾ ಸೋಮಣ್ಣ ಅವರು 28ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ನಿಮಿತ್ತ ರೀಲ್ಸ್ ಹಾಗೂ ಫೋಟೊಗಳನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಗುಲಾಬಿ ಹಾಗೂ ಬಿಳಿ ಬಣ್ಣದ ಹೊಸ ಔಟ್‌ಫಿಟ್‌ನಲ್ಲಿ ಸ್ಪಂದನಾ ಅವರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೊಗಳನ್ನು ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕರಿಮಣಿ’ ಧಾರಾವಾಹಿಯಲ್ಲಿ ಸಾಹಿತ್ಯ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು.
ಕರಿಮಣಿ ಧಾರಾವಾಹಿ ಮುಕ್ತಾಯದ ಬಳಿಕ ಸ್ಪಂದನಾ ಸೋಮಣ್ಣ ಕನ್ನಡದ ಬಿಗ್‌ಬಾಸ್ ಸೀಸನ್ 12ಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.