
ಗಿಲ್ಲಿ ನಟ, ಕಿಚ್ಚ ಸುದೀಪ್
ಚಿತ್ರ: ಇನ್‌ಸ್ಟಾಗ್ರಾಂ
ಕೊನೆಗೂ ಗಿಲ್ಲಿ ನಟ ಕನ್ನಡದ ಬಿಗ್‌ಬಾಸ್ ಸೀಸನ್ 12ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ವಿನ್ನರ್ ಆಗಿ ಹೊರ ಹೊಮ್ಮಿದ ಗಿಲ್ಲಿ ನಟನಿಗೆ ಭರ್ಜರಿ ಉಡುಗೊರೆಗಳನ್ನು ನೀಡಲಾಗಿದೆ.
ಗಿಲ್ಲಿ ನಟ, ಸುದೀಪ್, ರಕ್ಷಿತಾ ಶೆಟ್ಟಿ
ವಿಶೇಷ ಏನೆಂದರೆ ಕಿಚ್ಚ ಸುದೀಪ್ ಅವರು ವೇದಿಕೆ ಮೇಲೆ ಗಿಲ್ಲಿ ನಟನಿಗೆ ಪ್ರೀತಿಯಿಂದ ₹10 ಲಕ್ಷ ಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ಆ ಕೂಡಲೇ ಖುಷಿಯಿಂದ ಗಿಲ್ಲಿ ನಟ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಬಿಟ್ಟಿದ್ದಾರೆ.
ಈಗಾಗಲೇ ವಿನ್ನರ್ ಆಗಿರುವ ಗಿಲ್ಲಿ ನಟನಿಗೆ ಬಿಗ್‌ಬಾಸ್ ತಂಡ ಟ್ರೋಫಿ ಜೊತೆಗೆ ₹50 ಲಕ್ಷ ಹಾಗೂ ಮಾರುತಿ ಸುಜುಕಿ ಎಸ್‌ಯುವಿ ವಿಕ್ಟೋರಿಯಸ್ ಕಾರನ್ನು ಬಹುಮಾನದ ರೂಪದಲ್ಲಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.