
ಕಿಚ್ಚ ಸುದೀಪ್
ಚಿತ್ರ: ಇನ್‌ಸ್ಟಾಗ್ರಾಂ
ಕನ್ನಡದ ಬಿಗ್‌ಬಾಸ್ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಇದರ ನಡುವೆ ಕಿಚ್ಚ ಸುದೀಪ್ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಂನಲ್ಲಿ ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಸತತವಾಗಿ 12 ಸೀಸನ್ಗಳವರೆಗೆ ‘ಬಿಗ್‌ಬಾಸ್ ಕನ್ನಡ’ ನಿರೂಪಣೆ ನಡೆಸಿಕೊಟ್ಟು ದಾಖಲೆ ಮಾಡಿರುವ ಕಿಚ್ಚ ಸುದೀಪ್ ಅವರು, ಪ್ರಸ್ತುತ ಆವೃತ್ತಿಯು ಮುಕ್ತಾಯವಾಗುತ್ತಿರುವ ಹೊತ್ತಿನಲ್ಲಿ ಎಲ್ಲ ಸ್ಪರ್ಧಿಗಳಿಗೆ ಸುದೀಪ್ ಅವರು ಅಭಿನಂದನೆ ತಿಳಿಸಿದ್ದಾರೆ.
ಕಿಚ್ಚ ಸುದೀಪ್ ಪೋಸ್ಟ್‌ನಲ್ಲಿ ಏನಿದೆ?
‘ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ’ ಎಂದು ಬರೆದುಕೊಂಡಿದ್ದಾರೆ.
ಸದ್ಯ ವೀಕ್ಷಕರ ಚಿತ್ತ ಬಿಗ್‌ಬಾಸ್ ಸೀಸನ್ – 12ರ ವಿಜೇತರು ಯಾರಾಗಲಿದ್ದಾರೆ ಎಂಬುದರ ಮೇಲೆ ನೆಟ್ಟಿದೆ. ಇಂದು (ಜ.18) ಸಂಜೆ 6 ಗಂಟೆಗೆ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಸಂಚಿಕೆಯ ಕೊನೆಯಲ್ಲಿ ಬಿಗ್‌ಬಾಸ್ ವಿಜೇತರ ಹೆಸರನ್ನು ಕಿಚ್ಚ ಸುದೀಪ್ ಘೋಷಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.