ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿನ ಟಾಸ್ಕ್‌ಗಳು ಸ್ಪರ್ಧಿಗಳ ಶಕ್ತಿ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗಿಲ್ಲದೆ ಮನಸ್ಸು ಬಿಚ್ಚಿ ಮಾತನಾಡುವ ವೇದಿಕೆಯೂ ಆಗಿದೆ.
ತಣ್ಣನೆಯ ರಾತ್ರಿಯಲ್ಲಿ ಸ್ಪರ್ಧಿಗಳು ಪೈರ್ ಕ್ಯಾಂಪ್ ಹಾಕಿಕೊಂಡು ತಮ್ಮವರ, ಕುಟುಂಬಕ್ಕೆ ಕ್ಷಮೆ ಕೇಳಿದ್ದಾರೆ. ಅಪ್ಪ-ಅಮ್ಮನಿಗೆ ಕೊಟ್ಟ ಮಾತು, ಸಂಗಾತಿಯ ನೆನಪು, ಈಡೇರದೇ ಉಳಿದುಬಿಟ್ಟ ಭಾಷೆ, ಕೊನೆಗೂ ಒಪ್ಪಿಕೊಳ್ಳದೇ ತಮ್ಮೊಳಗೆ ಒಂದಾಗಿಸಿಕೊಂಡು ಅಪ್ಪಿಕೊಳ್ಳದೇ ಹೋದ ಕುಟುಂಬ, ಹೆತ್ತವರ ಬೆಂಬಲಕ್ಕೆ ಪ್ರತಿಫಲ ನೀಡಲಾಗದ ಅಸಹಾಯಕತೆ...ಹೀಗೆ ಒಬ್ಬೊಬ್ಬರದ್ದು ಒಂದೊಂದು ಕಥೆ
ಜಿಯೋ ಸಿನಿಮಾದಲ್ಲಿ 24 ಗಂಟೆಯೂ ನೇರಪ್ರಸಾರವಾಗುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸದಸ್ಯರು ಒಂದಾಗಿದ್ದಾರೆ. ಒಬ್ಬರ ಕಣ್ಣೀರನ್ನು ಇನ್ನೊಬ್ಬರು ವರೆಸಿದ್ದಾರೆ. ಒಬ್ಬರ ದುಃಖಕ್ಕೆ ಇನ್ನೊಬ್ಬರು ಹೆಗಲಾಗಿ ಸಮಾಧಾನ ಹೇಳಿದ್ದಾರೆ.
ಡ್ರೋನ್ ಪ್ರತಾಪ್ ಕುಟುಂಬದಿಂದ ದೂರವಿರುವ ನೋವು ಹಂಚಿಕೊಂಡರೆ, ಹೆಣ್ಣು ಮಗುವೆಂದು ಹುಟ್ಟಿದಾಗಿನಿಂದ ಕೇಳಿದ ಅವಮಾನದ ಮಾತುಗಳು ನಮ್ರತಾ ಕಣ್ಣಲ್ಲಿ ನೀರಾಗಿ ಹರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.