ಮಂಜು ಭಾಷಿಣಿ
ಚಿತ್ರ ಕೃಪೆ: ಕಲರ್ಸ್ ಕನ್ನಡ
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 12ಕ್ಕೆ ಎರಡನೇ ಸ್ಪರ್ಧಿಯಾಗಿ ಕನ್ನಡ ಕಿರುತೆರೆಯ ನಟಿ ಎಂಟ್ರಿ ಕೊಟ್ಟಿದ್ದಾರೆ.
ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ 'ಸಿಲ್ಲಿ ಲಲ್ಲಿ' ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ ಮಂಜು ಭಾಷಿಣಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ.
ನಟಿ ಮಂಜು ಭಾಷಿಣಿ ಈಗಾಗಲೇ ಸಿಲ್ಲಿ ಲಲ್ಲಿ ಧಾರವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಪ್ರಸ್ತುತವಾಗಿ ನಟಿ ಮಂಜು ಬಾಷಿಣಿ 'ಜಿ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಬಂಗಾರಮ್ಮ ಪಾತ್ರದಲ್ಲಿ ನಟಿಸುತ್ತಿದ್ದರು.
ಆದರೆ, ಇದೀಗ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಗೆ ಎರಡನೇ ಸ್ಪರ್ಧಿಯಾಗಿ ಕಾಲಿಡಲು ಸಜ್ಜಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.