
ಗಿಲ್ಲಿ ನಟ, ಗೃಹ ಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ 12ರ ಟ್ರೋಫಿ ಗೆದ್ದು ಬೀಗಿದ ಗಿಲ್ಲಿ ನಟನಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇತ್ತೀಚೆಗೆ ನಟ ಶಿವರಾಜ್‌ಕುಮಾರ್, ಸುದೀಪ್, ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಗಿಲ್ಲಿ ಭೇಟಿಯಾಗಿದ್ದರು.
ಆ ಬೆನ್ನಲ್ಲೇ ಈಗ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಗಿಲ್ಲಿ ನಟನನ್ನು ಭೇಟಿಯಾಗಿ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಆ ಬೆನ್ನಲ್ಲೆ ಈಗ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಗಿಲ್ಲಿ ನಟ ಭೇಟಿಯಾಗಿದ್ದಾರೆ. ಈ ವೇಳೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದ್ದಾರೆ
ಅದರ ಜೊತೆಗೆ ‘ವಿಶಿಷ್ಟ ಹಾಸ್ಯದ ಮೂಲಕ ನಾಡಿನ ಜನತೆಯನ್ನು ಮನರಂಜಿಸುತ್ತಿರುವ ಹಳ್ಳಿ ಸೊಗಡಿನ ಪ್ರತಿಭೆ 12ನೇ ಆವೃತ್ತಿಯ ಬಿಗ್‌ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮತ್ತಷ್ಟು ಯಶಸ್ಸು ಲಭಿಸಲಿ ಎಂದು ಹಾರೈಸಿದೆ’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.