ADVERTISEMENT

DKD ವೇದಿಕೆಗೆ ಬಂದ 7 ವರ್ಷದ ಬಾಲಕ: ಈತನ ಡ್ಯಾನ್ಸ್‌ಗೆ ಮನಸೋತ ಶಿವಣ್ಣ, ರಚಿತ ರಾಮ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ನವೆಂಬರ್ 2025, 12:25 IST
Last Updated 21 ನವೆಂಬರ್ 2025, 12:25 IST
<div class="paragraphs"><p>7 ವರ್ಷದ ಬಾಲಕ&nbsp;ಪ್ರೀತಮ್</p></div>

7 ವರ್ಷದ ಬಾಲಕ ಪ್ರೀತಮ್

   

ಚಿತ್ರ: ಇನ್‌ಸ್ಟಾಗ್ರಾಮ್

ಜೀ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರ ಹಾಗೂ ಭಾನುವಾರದಿಂದ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ಶೋ ಶುರುವಾಗಲಿದೆ. ಕಳೆದ ಸೀಸನ್‌ನಂತೆ ಈ ಬಾರಿಯೂ ಕೂಡ ಕಿರುತೆರೆಯ ಕಲಾವಿದರು ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಆಗಮಿಸಿದ್ದಾರೆ. ಜೊತೆಗೆ ಸಾಮಾನ್ಯ ಜನರಿಗೂ ಡ್ಯಾನ್ಸ್ ಮಾಡಲು ಅವಕಾಶ ನೀಡಲಾಗಿದೆ.

ADVERTISEMENT

ಜೀ ಕನ್ನಡ ಸಾಮಾಜಿಕ ಮಾಧ್ಯಮದಲ್ಲಿ ಮೆಗಾ ಆಡಿಷನ್ ಪ್ರೊಮೋಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ 7 ವರ್ಷದ ಬಾಲಕ ಎಂಟ್ರಿ ಕೊಟ್ಟು ತನ್ನ ಭರ್ಜರಿ ಡ್ಯಾನ್ಸ್ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

ಗದಗ ಜಿಲ್ಲೆಯ ಪ್ರೀತಮ್ ಎಂಬ ಬಾಲಕ ಈ ಬಾರಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋಗೆ ಬಂದಿದ್ದಾನೆ. ಆತನಿಗೆ ಇನ್ನೂ 7 ವರ್ಷ. ಆದರೆ, ಪ್ರೀತಮ್ ಡ್ಯಾನ್ಸ್ ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತೀರ್ಪುಗಾರರಾದ ರಚಿತಾ ರಾಮ್, ಶಿವಣ್ಣ ಹಾಗೂ ವಿಜಯ್ ರಾಘವೇಂದ್ರ ಅವರು ಈ ಪ್ರತಿಭೆಯನ್ನು ಕಂಡು ಅಚ್ಚರಿಪಟ್ಟಿದ್ದಾರೆ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋನಲ್ಲಿ ಶಿವರಾಜ್ ಕುಮಾರ್, ವಿಜಯ್ ರಾಘವೇಂದ್ರ, ಅರ್ಜುನ್ ಜನ್ಯ ಇವರೊಂದಿಗೆ ರಚಿತಾ ರಾಮ್ ಕೂಡ ತೀರ್ಪುಗಾರರಾಗಿದ್ದಾರೆ. ಮೆಗಾ ಆಡಿಷನ್ ನವೆಂಬರ್ 22 ಹಾಗೂ 23 ಅಂದರೆ ಶನಿವಾರ ಹಾಗೂ ಭಾನುವಾರ ಸಂಜೆ 7:30 ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.