ADVERTISEMENT

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋ ತೀರ್ಪುಗಾರರಾಗಿ ನಟಿ ರಚಿತಾ ರಾಮ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2025, 7:48 IST
Last Updated 6 ನವೆಂಬರ್ 2025, 7:48 IST
<div class="paragraphs"><p>ರಚಿತಾ ರಾಮ್, ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ, ಅರ್ಜುನ್ ಜನ್ಯ, ನಿರೂಪಕಿ ಅನುಶ್ರೀ</p></div>

ರಚಿತಾ ರಾಮ್, ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ, ಅರ್ಜುನ್ ಜನ್ಯ, ನಿರೂಪಕಿ ಅನುಶ್ರೀ

   

ಚಿತ್ರ: ಇನ್‌ಸ್ಟಾಗ್ರಾಮ್

ಚಂದನವನದ ನಟಿ ರಚಿತಾ ರಾಮ್ ಸಿನಿಮಾ ಜೊತೆ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮಜಾ ಭಾರತ’, ‘ಭರ್ಜರಿ ಬ್ಯಾಚ್ಯುಲರ್ಸ್’ ಕಾರ್ಯಕ್ರಮಗಳ ಬೆನ್ನಲ್ಲೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋನಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.

ADVERTISEMENT

ಈ ಬಗ್ಗೆ ನಟಿ ರಚಿತಾ ರಾಮ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡು ಮಾಹಿತಿ ಕೊಟ್ಟಿದ್ದಾರೆ. ಅದರ ಜೊತೆಗೆ ‘ಲೈಟ್ಸ್‌. ಕ್ಯಾಮರಾ. ಡ್ಯಾನ್ಸ್. ಮೊದಲ ದಿನ, ಮೊದಲ ಫ್ರೇಮ್ ಮತ್ತು ಶಾಶ್ವತವಾಗಿ ಸ್ಮರಣೀಯ’ ಎಂದು ಅಡಿಬರಹ ಹಾಕಿದ್ದಾರೆ.

ಇನ್ನು ಮುಂದೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋನಲ್ಲಿ ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ, ಅರ್ಜುನ್ ಜನ್ಯ ಇವರೊಂದಿಗೆ ರಚಿತಾ ರಾಮ್ ಕೂಡ ತೀರ್ಪುಗಾರರಾಗಿ ಇರಲಿದ್ದಾರೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಳೆದ ಹಲವು ಸೀಸನ್‌ಗಳಲ್ಲಿ ನಟಿ ರಕ್ಷಿತಾ ಪ್ರೇಮ್‌ ಅವರು ತೀರ್ಪುಗಾರರಾಗಿದ್ದರು.

ಇತ್ತೀಚೆಗೆ ನಟಿ ರಕ್ಷಿತಾ ಪ್ರೇಮ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಏಕಾಏಕಿ 'ಕಾಮಿಡಿ ಕಿಲಾಡಿಗಳು' ಹಾಗೂ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಶೋನಿಂದ ಹೊರ ಬಂದಿರುವುದಾಗಿ ಮಾಹಿತಿ ಹಂಚಿಕೊಂಡಿದ್ದರು. ಹೀಗಾಗಿ ಕಾಮಿಡಿ ಕಿಲಾಡಿಗಳು ಸೀಸನ್ 5 ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್ ಸ್ಥಾನಕ್ಕೆ ಹಿರಿಯ ನಟಿ ತಾರಾ ಅನುರಾಧ ಬಂದಿದ್ದಾರೆ. ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ರಕ್ಷಿತಾ ಪ್ರೇಮ್ ಅವರ ಸ್ಥಾನಕ್ಕೆ ತೀರ್ಪುಗಾರರಾಗಿ ರಚಿತಾ ರಾಮ್‌ ಅವರು ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.