ADVERTISEMENT

ಡ್ರಗ್ಸ್ ಜಾಲ : ನಿರೂಪಕಿ ಅನುಶ್ರಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 10:45 IST
Last Updated 24 ಸೆಪ್ಟೆಂಬರ್ 2020, 10:45 IST
ಅನುಶ್ರಿ
ಅನುಶ್ರಿ   

ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಡ್ರಗ್‌ ಮಾಫಿಯಾಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್‌ ಕಿಶೋರ್ ಶೆಟ್ಟಿ ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು, ಈ ಪ್ರಕರಣದ ಸಂಬಂಧ ಅನುಶ್ರೀ ಅವರಿಗೆ ವಾಟ್ಸಾಪ್‌ನಲ್ಲಿ ನೋಟಿಸ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಚಾರಣೆಯ ಸಂದರ್ಭ ಕಿಶೋರ್‌ ಅಮನ್‌ ಶೆಟ್ಟಿ ಅವರ ಆಪ್ತ ಸ್ನೇಹಿತ ತರುಣ್‌ ಅನುಶ್ರೀ ಅವರೊಂದಿಗೆ ಪಾರ್ಟಿ ಮಾಡಿದ್ದ ಎನ್ನುವ ವಿಚಾರವನ್ನು ತಿಳಿಸಿದ್ದು, ಅನುಶ್ರೀ ಅವರಿಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ.

ADVERTISEMENT

ಅನುಶ್ರೀ ಅವರಿಗೆ ನೋಟಿಸ್‌ ನೀಡಲು ಸಿಸಿಬಿ ತಂಡ ಬೆಂಗಳೂರಿಗೆ ಹೊರಟಿದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.