ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಗಿಚ್ಚಿ ಗಿಲಿಗಿಲಿ ಶಿವು-ಮಾನಸ ಜೋಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2025, 11:29 IST
Last Updated 22 ನವೆಂಬರ್ 2025, 11:29 IST
<div class="paragraphs"><p>ಮಾನಸ ಗುರುಸ್ವಾಮಿ ಹಾಗೂ&nbsp;ಶಿವಕುಮಾರ್</p></div>

ಮಾನಸ ಗುರುಸ್ವಾಮಿ ಹಾಗೂ ಶಿವಕುಮಾರ್

   

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ಹಾಸ್ಯ ಕಲಾವಿದ ಶಿವಕುಮಾರ್‌ ಹಾಗೂ ಮಾನಸ ಗುರುಸ್ವಾಮಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಮಾನಸ ಗುರುಸ್ವಾಮಿ

ADVERTISEMENT

ಇದೇ ನವೆಂಬರ್ 27ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮಾನಸ ಗುರುಸ್ವಾಮಿ ಹಾಗೂ ಶಿವಕುಮಾರ್‌ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ.

ಮಾನಸ ಗುರುಸ್ವಾಮಿ ಹಾಗೂ ಶಿವಕುಮಾರ್ ಗಿಚ್ಚಿ ಗಿಲಿಗಿಲಿ ಮೂಲಕ ಖ್ಯಾತಿ ಪಡೆದುಕೊಂಡಿದ್ದರು. ತಮ್ಮ ಅದ್ಭುತ ಅಭಿನಯದ ಮೂಲಕವೇ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಶಿವಕುಮಾರ್

ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಈ ಇಬ್ಬರ ಪ್ರೀತಿ ವಿಚಾರ ಹರಿದಾಡುತ್ತಲೇ ಇತ್ತು. ಆದರೆ ಶಿವು ಹಾಗೂ ಮಾನಸ ಅವರು ಈ ಬಗ್ಗೆ ಎಲ್ಲೂ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರಲಿಲ್ಲ.

ಮಾನಸ ಗುರುಸ್ವಾಮಿ ಹಾಗೂ ಶಿವಕುಮಾರ್

ಇದೀಗ ಗಿಚ್ಚಿ ಗಿಲಿಗಿಲಿ ಮಾನಸ ಹಾಗೂ ಶಿವಕುಮಾರ್​ ಜೋಡಿ ಸದ್ಯದಲ್ಲೇ ಮದುವೆ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಇಬ್ಬರ ನಿಶ್ಚಿತಾರ್ಥದ ಸಮಾರಂಭಕ್ಕೆ ಕಿರುತೆರೆ ಕಲಾವಿದರು ಭಾಗಿಯಾಗುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.