ಗಿಚ್ಚಿ ಗಿಲಿಗಿಲಿ ಜ್ಯೂನಿಯರ್ಸ್
ಕನ್ನಡ ಕಿರುತೆರೆಯಲ್ಲಿ ಒಂದಾದ ಮೇಲೆ ಒಂದರಂತೆ ರಿಯಾಲಿಟಿ ಶೋಗಳು ಬರುತ್ತಲೇ ಇರುತ್ತವೆ. ವಾರಾಂತ್ಯ ಬಂದರೆ ಸಾಕು ವೀಕ್ಷಕರು ರಿಯಾಲಿಟಿ ಶೋಗಳನ್ನು ನೋಡಲು ಟಿವಿ ಮುಂದೆ ಕುಳಿತು ಬಿಡುತ್ತಾರೆ. ಈ ಹಿಂದೆ ಪ್ರತಿ ವೀಕೆಂಡ್ನಲ್ಲಿ ತಮ್ಮ ಕಾಮಿಡಿ ಮೂಲಕ ವೀಕ್ಷಕರನ್ನು ನಗಿಸುತ್ತಿದ್ದ ಗಿಚ್ಚಿ ಗಿಲಿಗಿಲಿ ಶೋ ಈಗ ಮತ್ತೆ ಬರುತ್ತಿದೆ.
ಆದರೆ, ಇದು ಕೊಂಚ ವಿಭಿನ್ನ. ಇಷ್ಟು ಸೀಸನ್‌ಗಳ ಕಾಲ ಗಿಚ್ಚಿ ಗಿಲಿಗಿಲಿ ಕಲಾವಿದರು ವೀಕ್ಷಕರಿಗೆ ಮನರಂಜನೆ ನೀಡುತ್ತಿದ್ದರು. ಈಗ ಸೀನಿಯರ್ಸ್‌ಗಳಿಗೆ ಟಕ್ಕರ್ ಕೊಡೋದಕ್ಕೆ ಜೂನಿಯರ್ಸ್ ಬರುತ್ತಿದ್ದಾರೆ. ಹೀಗಾಗಿ ಕಲರ್ಸ್ ಕನ್ನಡ ವಾಹಿನಿಯು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆಡಿಷನ್ ನಡೆಸುತ್ತಿದೆ.
ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ಆಡಿಷನ್‌ನಲ್ಲಿ ಭಾಗವಹಿಸಿ:
ಕಲರ್ಸ್ ಕನ್ನಡ ವಾಹಿನಿ ಬೆಂಗಳೂರಿನಲ್ಲಿ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಶೋಗಾಗಿ ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಅಕ್ಷಯ ಸ್ಟುಡಿಯೋ, ನಾಗರಬಾವಿ ಆವರಣದಲ್ಲಿ ಆಡಿಷನ್ ನಡೆಯಲಿದೆ. 5 ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಡಿಷನ್‌ನಲ್ಲಿ ಆಯ್ಕೆಯಾದ ಮಕ್ಕಳು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಶೋದಲ್ಲಿ ಕಲಾವಿದರೊಂದಿಗೆ ಪಾಲ್ಗೊಳ್ಳಬಹುದು. ಅವರಿಗೆ ಅತ್ಯುತ್ತಮ ತರಬೇತಿಯನ್ನೂ ನೀಡಲಾಗುತ್ತದೆ.
ಮಕ್ಕಳ ಸಂಭಾಷಣಾ ಸಾಮರ್ಥ್ಯ, ತಕ್ಷಣದ ಪ್ರತಿಕ್ರಿಯೆ, ಕಥೆ ಹೇಳುವ ಶೈಲಿ ಇತ್ಯಾದಿ ಅಂಶಗಳನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುತ್ತದೆ. ಹೆಚ್ಚಿನ ವಿವರಗಳನ್ನು ಆಡಿಷನ್ ಸ್ಥಳದಲ್ಲಿ ನೀಡಲಾಗುವುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ ಮತ್ತು (ಮಕ್ಕಳ ಮತ್ತು ಪೋಷಕರ) ಆಧಾರ್ ಕಾರ್ಡ್‌ನ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ ಕನ್ನಡ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.