ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಗಿಲ್ಲಿ ನಟ
ಚಿತ್ರ: siddaramaiah
ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ 12ರ ಟ್ರೋಫಿ ಗೆದ್ದ ಗಿಲ್ಲಿ ನಟನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇತ್ತೀಚೆಗೆ ನಟ ಶಿವರಾಜ್‌ಕುಮಾರ್, ಸುದೀಪ್ ಅವರನ್ನು ಗಿಲ್ಲಿ ಭೇಟಿಯಾಗಿದ್ದರು.
ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಭೇಟಿಯಾಗಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದು, ‘12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ’ ಎಂದು ಬರೆದುಕೊಂಡಿದ್ದಾರೆ.
ಭೇಟಿ ವೇಳೆ ಹಾರ ಹಾಕಿ ಗಿಲ್ಲಿ ನಟ ಅವರನ್ನು ಸಿಎಂ ಸನ್ಮಾನಿಸಿದ್ದಾರೆ.
40 ಕೋಟಿಗೂ ಅಧಿಕ ಮತಗಳನ್ನು ಪಡೆದು ರಿಯಾಲಿಟಿ ಶೋ ವಿನ್ನರ್ ಆಗಿರುವ ಗಿಲ್ಲಿ ಅವರಿಗೆ ಹುಟ್ಟೂರು ಮಳವಳ್ಳಿ ತಾಲ್ಲೂಕಿನ ದಡದಪುರದಲ್ಲಿ ಅದ್ಧೂರಿಯಾಗಿ ಸ್ವಾಗತ ದೊರಕಿತ್ತು.
ಹಳ್ಳಿಯಿಂದ ಬಂದು ತಮ್ಮ ನಟನೆ, ಹಾಸ್ಯದ ಮೂಲಕ ಅಭಿಮಾನಿಗಳ ಬಳಗವನ್ನೇ ಸೃಷ್ಟಿಸಿಕೊಂಡಿರುವ ಗಿಲ್ಲಿ, ವಿಡಿಯೊ ಮಾಡಿ ಹಂಚಿಕೊಳ್ಳುವ ಮೂಲಕ ಜನತೆಗೆ ಧನ್ಯವಾದ ಹೇಳಿದ್ದಾರೆ.
ಪುನೀತ್ ರಾಜ್‌ಕುಮಾರ್ ಸಮಾಧಿಗೆ ಗಿಲ್ಲಿ ಭೇಟಿ
ಗಿಲ್ಲಿ ನಟ ಅವರು ಬಿಗ್‌ಬಾಸ್ ಟ್ರೋಫಿಯೊಂದಿಗೆ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ, ‘ನಿಮ್ಮ ಹೆಸರೇ ಶಕ್ತಿ, ನಿಮ್ಮ ನೆನಪೇ ಸ್ಫೂರ್ತಿ. ಬಿಗ್ ಬಾಸ್ ಟ್ರೋಫಿಯನ್ನು ‘ಪರಮಾತ್ಮ’ನ ಪಾದಕ್ಕೆ ಇಟ್ಟ ಗಳಿಗೆ. ಅಪ್ಪು ಸರ್. ಜೊತೆಗಿರದ ಜೀವ ಎಂದಿಗೂ ಜೀವಂತ’ ಎಂದು ಬರೆದುಕೊಂಡು, ಪೋಟೊ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.