ADVERTISEMENT

ಆಕಸ್ಮಿಕವಾಗಿ ಅಧಿಕಾರ ಪಡೆದು ಬರ್ತಿದ್ದಾಳೆ ‘ಜೈ ಲಲಿತಾ’; ಇದು ಮುದ್ದು ಬಜಾರಿಯ ಕಥೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2025, 12:35 IST
Last Updated 3 ಡಿಸೆಂಬರ್ 2025, 12:35 IST
<div class="paragraphs"><p>ನಟ ಶಿವಾಂಕ್, ‌ನಟಿ ಮನಸ್ವಿ</p></div>

ನಟ ಶಿವಾಂಕ್, ‌ನಟಿ ಮನಸ್ವಿ

   

ಸ್ಟಾರ್ ಸುವರ್ಣ ವಾಹಿನಿಯಲ್ಲಿ ವಿಭಿನ್ನ ಕಥಾ ಹಂದರದ ಹೊಸ ಕಥೆ ‘ಜೈ ಲಲಿತಾ’ ಧಾರಾವಾಹಿ ಬರುತ್ತಿದೆ. ಭೈರವಪುರ ಎಂಬ ಸುಂದರ ಹಳ್ಳಿಯಲ್ಲಿ ಸಂಪ್ರದಾಯಸ್ಥ ಮನೆತನದಲ್ಲಿ ಬೆಳೆದಿರುವ ಹುಡುಗಿ ಕಥಾ ನಾಯಕಿ ಲಲಿತಾ ಅವರಿಗೆ ಬಿಎ ಪಾಸ್ ಆಗಬೇಕು ಎನ್ನುವುದು ದೊಡ್ಡ ಕನಸು. ಆದರೆ, ಒಳ್ಳೆಯ ಕೆಲಸ ಸಿಗುತ್ತೆ ಅಂತ ಅಲ್ಲ. ಬದಲಿಗೆ ಮದುವೆ ಆಗೋದಕ್ಕೆ ಒಳ್ಳೆಯ ಹುಡುಗ ಸಿಗುತ್ತಾನೆ ಅನ್ನೋ ಆಸೆಗೆ.

ನಟ ರಾಕಿಂಗ್ ಸ್ಟಾರ್ ಯಶ್‌ನ ಅಪ್ಪಟ ಅಭಿಮಾನಿಯಾಗಿರುವ ಲಲಿತಾಗೆ ಸಿನಿಮಾ ಅಂದ್ರೆ ಪಂಚ ಪ್ರಾಣ. ಥಿಯೇಟರ್‌ಗೆ ಒಳ್ಳೆಯ ಸಿನಿಮಾ ಬಂದರೆ ಸಾಕು ಹೋಗದೆ ಇರೋ ಮಾತೇ ಇಲ್ಲ. ಡ್ರಾಮಾ ಕ್ವೀನ್, ಶುದ್ಧ ತರ್ಲೆಯಾಗಿರೋ ಈಕೆ ಊರಿನವರ ಮನೆಮಗಳು, ಜೊತೆಗೆ ತಂದೆಯ ಮುದ್ದಿನ ಮಗಳು.

ADVERTISEMENT

ನಟ ಶಿವಾಂಕ್, ‌ನಟಿ ಮನಸ್ವಿ

ಇನ್ನು ಅದೇ ಊರಿನ ರಾಜಕಾರಣಿ ದೇವರಾಜ್ ಚಕ್ರವರ್ತಿಯ ಎರಡನೇ ಮಗ ಕಥಾ ನಾಯಕ ಜೈರಾಜ್. ದೇವರಾಜ್‌ಗೆ ತಾನು ಹೇಳಿದ್ದೆ ಮಗ ಕೇಳಬೇಕು ಅನ್ನೋ ಹಠ. ಆದರೆ ತದ್ವಿರುದ್ಧ ಮನಸ್ಥಿತಿಯನ್ನು ಹೊಂದಿರುವ ಜೈರಾಜ್ ಮಾತ್ರ ತನಗನಿಸಿದನ್ನೇ ಮಾಡೋ ಶೂರ. ಅಚಾನಕ್ ಆಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಲಲಿತಾ, ಪಂಚಾಯತ್ ಚುನಾವಣೆಯಲ್ಲಿ ಊರವರ ಮತಗೆದ್ದು ಅಧ್ಯಕ್ಷೆಯಾಗುತ್ತಾಳೆ.

ಮುಂದೆ ದೇವರಾಜ್ ಚಕ್ರವರ್ತಿ ರಚಿಸುವ ಮೋಸದ ಹುನ್ನಾರದಿಂದ ಲಲಿತಾಳನ್ನು ತನ್ನ ಮನೆಯ ಸೊಸೆಯನ್ನಾಗಿ ಮಾಡಿಕೊಳ್ಳುತ್ತಾನೆ. ಆದರೆ ಈ ಮದುವೆ ಜೈರಾಜ್‌ಗೆ ಇಷ್ಟವಿಲ್ಲ ಎಂಬ ವಿಷಯ ತಿಳಿಯದೆ ಮದುವೆಯಾಗಿರೋ ಲಲಿತಾಳ ಮುಂದಿನ ನಡೆ ಏನಾಗಬಹುದು? ಮದುವೆಯೇ ಕನಸಾಗಿದ್ದವಳಿಗೆ ಮದುವೆಯ ಜೀವನ ಮುಳ್ಳಿನಂತಾಗುತ್ತಾ? ಊರನ್ನೇ ಗೆದ್ದವಳು ಅತ್ತೆಯ ಮನಸ್ಸನ್ನು ಗೆದ್ದು ಚಕ್ರವರ್ತಿ ಮನೆತನದ ಸೊಸೆ ಎಂಬ ಸ್ಥಾನವನ್ನು ಪಡೆದುಕೊಳ್ಳುತ್ತಾಳಾ? ಮುಂದೆ ಲಲಿತಾಳ ಮುಗ್ದತೆಗೆ ಕರಗಿ ಮನಸೋಲ್ತಾನ ಜೈರಾಜ್? ಎಂಬುದೇ ಈ ಕಥೆಯ ಮುಖ್ಯ ಹಂದರ.

ಜೈ ಲಲಿತಾ ಧಾರಾವಾಹಿ ಪೋಸ್ಟರ್

ನಿರ್ಮಾಪಕ ಶ್ರೀನಿಧಿ ಡಿ.ಎಸ್ ಅವರ 'ಶ್ರೀ ಭ್ರಾಮರೀ ಕ್ರಿಯೇಶನ್ಸ್' ಎಂಬ ನಿರ್ಮಾಣ ಸಂಸ್ಥೆಯಿಂದ 'ಜೈ ಲಲಿತಾ' ಧಾರಾವಾಹಿ ರೂಪುಗೊಳ್ಳುತ್ತಿದ್ದು ದರ್ಶಿತ್ ಅವರ ನಿರ್ದೇಶನದಲ್ಲಿ ಮೂಡಿ ಬರಲಿದೆ. ನಾಯಕ ಜೈರಾಜ್ ಪಾತ್ರದಲ್ಲಿ ನಟ ಶಿವಾಂಕ್ ಹಾಗೂ ನಾಯಕಿ ಲಲಿತಾ ಪಾತ್ರದಲ್ಲಿ ನಟಿ ಮನಸ್ವಿ ನಟಿಸುತ್ತಿದ್ದಾರೆ. ಜೊತೆಗೆ ಸುನಿಲ್ ಪುರಾಣಿಕ್, ಸ್ಪಂದನ, ರೋಹಿತ್, ನಿರಂಜನ್, ರಶ್ಮಿತಾ ಹಾಗು ಶ್ವೇತಾ ರಾವ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಈ ಸೀರಿಯಲ್ ನಲ್ಲಿ ಅಭಿನಯಿಸುತ್ತಿದ್ದಾರೆ. ಈ ಧಾರಾವಾಹಿ ಡಿಸೆಂಬರ್. 8ರಿಂದ ಪ್ರತಿದಿನ ರಾತ್ರಿ 9.30ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.