
ಗಾಯಕಿ ಐಶ್ವರ್ಯ ರಂಗರಾಜನ್
ಚಿತ್ರ: ಇನ್‌ಸ್ಟಾಗ್ರಾಮ್
ನಟ ದರ್ಶನ್ ಅಭಿನಯದ ‘ಕ್ರಾಂತಿ’ ಸಿನಿಮಾದ ಶೇಕ್ ಇಟ್ ಪುಷ್ಪವತಿ ಹಾಡು ಹಾಡಿದ್ದ ಗಾಯಕಿ ಐಶ್ವರ್ಯ ರಂಗರಾಜನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸರಿಗಮಪ ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದುಕೊಂಡಿದ್ದ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಮಂಗಳೂರು ಮೂಲದ ಸಾಯಿ ಸ್ವರೂಪ ಎಂಬುವವರ ಜೊತೆಗೆ ಮದುವೆ ಆಗಿದ್ದಾರೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಗಾಯಕಿ ಐಶ್ವರ್ಯಾ ರಂಗರಾಜನ್ ಹಾಗೂ ಸಾಯಿ ಸ್ವರೂಪ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ಈಗ ಗಾಯಕಿ ಐಶ್ವರ್ಯಾ ರಂಗರಾಜನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇನ್ನು, ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸಾಮಾಜಿಕ ಮಧ್ಯಮದಲ್ಲಿ ಮದುವೆಯಾದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ 'ನಾನು ನನ್ನ ಆತ್ಮೀಯ ಸ್ನೇಹಿತನನ್ನು ಮದುವೆಯಾದೆ’ ಎಂದು ಅಡಿಬರಹ ಹಾಕಿದ್ದಾರೆ.
ಗಾಯಕಿ ಐಶ್ವರ್ಯಾ ರಂಗರಾಜನ್ ಅವರು, ‘ಕ್ರಾಂತಿ’, ‘ಯುಐ’, ‘ಕಬ್ಜ’, ‘ಏಕ್ ಲವ್ ಯಾ’. ‘ಸಲಗ’, ‘ಘೋಸ್ಟ್’, ‘ಕೆಜಿಎಫ್’ ಸೇರಿದಂತೆ ಹಲವು ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.