ಸ್ಟ್ಯಾಂಡಿಂಗ್ ಕಾಮೆಡಿಯನ್ ಕಪಿಲ್ ಶರ್ಮಾ ಮತ್ತು ಗಿನ್ನಿ ಛಾತ್ರಾ ತಮ್ಮ ಪುತ್ರಿಯ ಚಿತ್ರಗಳನ್ನು ಮೊದಲ ಬಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
‘ಇವಳು ನಮ್ಮ ಹೃದಯದ ಭಾಗ’ ಎಂದು ಫೋಟೊ ಕೆಳಗೆ ಕಪಿಲ್ ಅಡಿಬರಹ ಬರೆದಿದ್ದಾರೆ. ಇದೇ ಡಿಸೆಂಬರ್ 10ರಂದು ಗಿನ್ನಿ ಛಾತ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.ಮಗಳಿಗೆ ಅನೈರಾ ಶರ್ಮಾ ಎಂದು ಹೆಸರಿಟ್ಟಿದ್ದಾರೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಕಪಿಲ್ ಮಗಳಿಗೆ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.