ADVERTISEMENT

ದೇಶದ್ರೋಹದ ಹೇಳಿಕೆ ಆರೋಪ: ಕೇರಳದ ಕಿರುತೆರೆ ನಟನ ವಿರುದ್ಧ ಪ್ರಕರಣ

ಪಿಟಿಐ
Published 14 ಮೇ 2025, 9:14 IST
Last Updated 14 ಮೇ 2025, 9:14 IST
<div class="paragraphs"><p>ಅಖಿಲ್ ಮಾರಾರ್ </p></div>

ಅಖಿಲ್ ಮಾರಾರ್

   

Credit: X/@akhilMarar123

ಕೊಲ್ಲಂ: ದೇಶದ್ರೋಹದ ಹೇಳಿಕೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಕೇರಳದ ಕಿರುತೆರೆ ನಟ ಅಖಿಲ್ ಮರಾರ್ ವಿರುದ್ಧ ಪ್ರಕರಣ ದಾಖಲಾಗಿದೆ. 

ADVERTISEMENT

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ರ ಅಡಿ ಮರಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. 

ಮರಾರ್ ವಿರುದ್ಧ ಬಿಜೆಪಿಯ ಮುಖಂಡರೊಬ್ಬರು ದೂರು ನೀಡಿದ್ದು ಮರಾರ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ವಿಡಿಯೊದಲ್ಲಿ ದೇಶ ವಿರೋಧಿ ಹೇಳಿಕೆಗಳಿವೆ ಎಂದು ಆರೋಪಿಸಿದ್ದಾರೆ. 

ಈ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಲಾಗಿದೆ. ಮುಂದಿನ ವಿಚಾರಣೆಗಾಗಿ ಈ ವಿಡಿಯೊವನ್ನು ವಶಕ್ಕೆ ಪಡೆಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.