
ರಾಯರ ಸನ್ನಿಧಿಯಲ್ಲಿ ನೀತು ವನಜಾಕ್ಷಿ
ಕೃಪೆ: ಇನ್‌ಸ್ಟಾಗ್ರಾಂ
ಬಿಗ್‌ಬಾಸ್ ಮಾಜಿ ಸ್ಪರ್ಧಿ ನೀತು ವನಜಾಕ್ಷಿ ಅವರು ಗುರುವಾರ ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ಹೊಸ ಉದ್ಯಮ ಆರಂಭಿಸಿರುವ ಹಿನ್ನೆಲೆಯಲ್ಲಿ ರಾಯರ ಸನ್ನಿಧಿಗೆ ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನೀತು ಅವರ ಹೊಸ ಉದ್ಯಮಕ್ಕೆ ಮಾಜಿ ಬಿಗ್‌ಬಾಸ್ ಸ್ಪರ್ಧಿಗಳಾದ ಮೋಕ್ಷಿತಾ, ತನಿಷಾ ಕುಪ್ಪಂಡ ಅವರು ಶುಭಕೋರಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದಿಂದ ಬಂದಿರುವ ನೀತು ಅವರು ಮಾಡೆಲಿಂಗ್ ಕ್ಷೇತ್ರದಲ್ಲೂ ಜನಪ್ರಿಯತೆ ಗಳಿಸಿದ್ದಾರೆ. ಬಳಿಕ ಬಿಗ್‌ಬಾಸ್ ಮನೆಗೆ ಪ್ರವೇಶಿಸಿ, ತಮ್ಮದೇ ಶೈಲಿಯಲ್ಲಿ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ್ದರು.
ಅದಲ್ಲದೇ, ನೀತು ಅವರು ಬೆಂಗಳೂರಿನಲ್ಲಿ ಟ್ಯಾಟೂ ಉದ್ಯಮ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ತಾಯಿ ವನಜಾಕ್ಷಿಗಾಗಿ ಉತ್ತರ ಕರ್ನಾಟಕ ಶೈಲಿಯ ಹೋಟೆಲ್ ತೆರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.