ADVERTISEMENT

ಬೋಲ್ಡ್ ಲುಕ್‌ನಲ್ಲಿ ‘ಪ್ರೇಮಕಾವ್ಯ’ ಧಾರಾವಾಹಿ ನಟಿ ಶ್ವೇತಾ ಕೊಗ್ಲೂರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಫೆಬ್ರುವರಿ 2026, 7:45 IST
Last Updated 21 ಫೆಬ್ರುವರಿ 2026, 7:45 IST
<div class="paragraphs"><p>ನಟಿ ಶ್ವೇತಾ ಕೊಗ್ಲೂರ್‌</p></div>

ನಟಿ ಶ್ವೇತಾ ಕೊಗ್ಲೂರ್‌

   

ಚಿತ್ರ: ಇನ್‌ಸ್ಟಾಗ್ರಾಂ

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಪ್ರೇಮಕಾವ್ಯ ಧಾರಾವಾಹಿ ನಟಿ ಸಖತ್ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ADVERTISEMENT

ಪ್ರೇಮಕಾವ್ಯ ಧಾರಾವಾಹಿಯಲ್ಲಿ ಸ್ನೇಹಾ ಪಾತ್ರಕ್ಕೆ ಬಣ್ಣ ಹಚ್ಚಿದ್ದು ನಟಿ ಶ್ವೇತಾ ಕೊಗ್ಲೂರ್‌. ಇವರು ಸ್ನೇಹಾ ಪಾತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ.

ಇದೀಗ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಬೋಲ್ಡ್‌ ಲುಕ್‌ನಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಇದೇ ಬೋಲ್ಡ್‌ ಲುಕ್‌ನ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನಟಿಯ ಪೋಸ್‌ಗೆ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ನಟಿ ಶ್ವೇತಾ ಅವರು ಈ ಹಿಂದೆ ‘ದೊರೆಸಾನಿ’ ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉದಯ ವಾಹಿನಿಯಲ್ಲಿ ‘ಸೇವಂತಿ’, ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ‘ಮುದ್ದು ಮನಸೇ’ ಧಾರಾವಾಹಿಯಲ್ಲಿ ನಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.