ನಟಿ ರಶ್ಮಿ ಪ್ರಭಾಕರ್ ಹಾಗೂ ನಿತಿನ್ ದಂಪತಿ
ಚಿತ್ರ: ಇನ್‌ಸ್ಟಾಗ್ರಾಮ್
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ನಟಿ ರಶ್ಮಿ ಪ್ರಭಾಕರ್ ಅವರು ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಈ ಬಗ್ಗೆ ನಟಿ ರಶ್ಮಿ ಪ್ರಭಾಕರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಮಗುವಿನ ಫೋಟೊವನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಜೊತೆಗೆ ‘ನಮ್ಮ ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ. 3/10/2025ರಂದು ನಮಗೆ ಪುಟ್ಟ ರಾಜಕುಮಾರ ಸಿಕ್ಕಿದ್ದಾನೆ. ಇಡೀ ವಿಶ್ವಕ್ಕೆ ಧನ್ಯವಾದಗಳು’ ಎಂದು ಅಡಿಬರಹ ಬರೆದುಕೊಂಡಿದ್ದಾರೆ.
ನಟಿ ರಶ್ಮಿ ಪ್ರಭಾಕರ್ ಅವರು, 2022 ಏಪ್ರಿಲ್ 25ರಂದು ನಿಖಿಲ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ಅವರು ಅದ್ಧೂರಿಯಾಗಿ ಸಪ್ತಪದಿ ತುಳಿದಿದ್ದರು. ಇದೀಗ ದಂಪತಿ ಅಕ್ಟೋಬರ್ 3ರಂದು ತಮ್ಮ ಚೊಚ್ಚಲ ಮಗುವನ್ನು ಬರಮಾಡಿಕೊಂಡಿದ್ದಾರೆ.
ನಟಿ ರಶ್ಮಿ ಅವರು, ‘ಲಕ್ಷ್ಮೀ ಬಾರಮ್ಮ’, ‘ಜೀವನಚೈತ್ರ’, ‘ಶುಭವಿವಾಹ’, ‘ಮನಸೆಲ್ಲಾ ನೀನೇ’ ಸೇರಿದಂತೆ ಕನ್ನಡ ಹಾಗೂ ಪರಭಾಷೆಯ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಇನ್ನು, ನಟಿ ಹಂಚಿಕೊಂಡ ಪೋಸ್ಟ್ ನೋಡಿ, ಸ್ನೇಹಿತರು ಹಾಗೂ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.