
ಪಿಟಿಐ
ಗಾಯಕ ಸಚಿನ್ ಸಾಂಘ್ವಿ
ಚಿತ್ರ: ಫೇಸ್‌ಬುಕ್
ಮುಂಬೈ: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಲಿವುಡ್ ಗಾಯಕ ಮತ್ತು ಸಂಗೀತ ಸಂಯೋಜಕ ಸಚಿನ್ ಸಾಂಘ್ವಿ ಅವರನ್ನು ಬಂಧಿಸಲಾಗಿದೆ.
'ಸ್ತ್ರೀ 2' ಮತ್ತು 'ಭೇಡಿಯಾ' ಸಿನಿಮಾದ ಜನಪ್ರಿಯ ಹಾಡುಗಳನ್ನು ಸಂಯೋಜಿಸಿರುವ ಸಚಿನ್ ಸಾಂಘ್ವಿ ಅವರನ್ನು ಗುರುವಾರ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು, ದೂರುದಾರೆ ಮಹಿಳೆಯು ‘ಫೆಬ್ರವರಿ 2024ರಲ್ಲಿ ಸಂಘ್ವಿ ನನ್ನೊಂದಿಗೆ ಸಂಪರ್ಕ ಬೆಳೆಸಿದರು. ಇನ್‌ಸ್ಟಾಗ್ರಾಮ್‌ನಲ್ಲಿ ನನಗೆ ಸಂದೇಶ ಕಳುಹಿಸಿದ್ದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.