
ನಟಿ ಸಂಜನಾ ಬುರ್ಲಿ
ಚಿತ್ರ: ಇನ್‌ಸ್ಟಾಗ್ರಾಂ
ಸದ್ಯದಲ್ಲೆ ಕಿರುತೆರೆ ನಟಿ ಸಂಜನಾ ಬುರ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು.
ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದ ಹೊರಬಂದ ಬಳಿಕ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಗಂಧದ ಗುಡಿ’ಯಲ್ಲಿ ನಟಿಸುತ್ತಿದ್ದಾರೆ.
ಇದರ ನಡುವೆಯೇ ನಟಿ ಸಂಜನಾ ಬುರ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ ನಟಿ ಸಂಜನಾ ಬುರ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಕುಟುಂಬಸ್ಥರ ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ನೆರವೇರಿದ್ದು, ಮಾರ್ಚ್ ತಿಂಗಳಿನಲ್ಲಿ ಸಮರ್ಥ ಎಂಬುವವರ ಜೊತೆಗೆ ಮದುವೆಯಾಗಲಿದ್ದಾರೆ.
ಚೆನ್ನಗಿರಿ ಮೂಲದ ಸಮರ್ಥ್ ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಮರ್ಥ.ಸಿ.ಎಸ್ ಅವರಿಗೆ ಪ್ರಯಾಣ, ಅನ್ವೇಷಣೆ ಜೊತೆಗೆ ಅಥ್ಲೀಟ್, ಹ್ಯಾಂಡ್‌ಬಾಲ್ ಕ್ರೀಡೆಯ ಮೇಲೆ ಆಸಕ್ತಿ ಹೊಂದಿದ್ದಾರೆ.
ಈಗ ನಟಿ ನಿಶ್ಚಿತಾರ್ಥದ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.