ADVERTISEMENT

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಪುಟ್ಟಕ್ಕನ ಮಕ್ಕಳು’ ನಟಿ ಸಂಜನಾ ಬುರ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜನವರಿ 2026, 5:29 IST
Last Updated 26 ಜನವರಿ 2026, 5:29 IST
<div class="paragraphs"><p>ಸಂಜನಾ ಬುರ್ಲಿ  </p></div>

ಸಂಜನಾ ಬುರ್ಲಿ

   

ಚಿತ್ರ: ಇನ್‌ಸ್ಟಾಗ್ರಾಂ

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ನಟಿ ಸಂಜನಾ ಬುರ್ಲಿ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಸ್ನೇಹಾ ಪಾತ್ರದಲ್ಲಿ ಸಂಜನಾ ಬುರ್ಲಿ ಅವರು ನಟಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ADVERTISEMENT

ಸಂಜನಾ ಬುರ್ಲಿ

ಆದರೆ ಅಚ್ಚರಿ ಎಂಬಂತೆ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದ ಆಚೆ ಬಂದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಗಂಧದಗುಡಿ’ಯಲ್ಲಿ ನಟಿಯಾಗಿ ಅಭಿನಯಿಸುತ್ತಿದ್ದಾರೆ. ಇದೇ ಹೊತ್ತಲ್ಲೇ ನಟಿ ಸಂಜನಾ ಬುರ್ಲಿ ಅವರು ನಿನ್ನೆ (ಜ.25) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಂಜನಾ ಬುರ್ಲಿ

ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೊಗಳನ್ನು ನಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ನಮ್ಮ ಜೀವನದ ಈ ಹೊಸ ಹೆಜ್ಜೆಗೆ ನನ್ನ ಎಲ್ಲಾ ಅಭಿಮಾನಿಗಳು ಮತ್ತು ಅನುಯಾಯಿಗಳ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಸಂಜನಾ ಬುರ್ಲಿ

ನಟಿ ಸಂಜನಾ ಬುರ್ಲಿ ಅವರ ಜತೆ ನಿಶ್ಚಿತಾರ್ಥ ಮಾಡಿಕೊಂಡ ಹುಡುಗನ ಹೆಸರು ಸಮರ್ಥ.ಸಿ.ಎಸ್. ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನವ‌ರು. ಸಮರ್ಥ.ಸಿ.ಎಸ್ ಅವರಿಗೆ ಪ್ರಯಾಣ, ಅನ್ವೇಷಣೆ ಜೊತೆಗೆ ಅಥ್ಲೀಟ್, ಹ್ಯಾಂಡ್‌ಬಾಲ್ ಕ್ರೀಡೆಯ ಮೇಲೆ ಆಸಕ್ತಿ ಹೊಂದಿದ್ದಾರೆ. ಈ ಬಗ್ಗೆ ಸಮರ್ಥ.ಸಿ.ಎಸ್ ತಮ್ಮ ಇನ್‌ಸ್ಟಾಗ್ರಾಂ ಬಯೋದಲ್ಲಿ ಬರೆದುಕೊಂಡಿದ್ದಾರೆ.

ಸಂಜನಾ ಬುರ್ಲಿ

ಸದ್ಯ ನಟಿ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೊಗಳನ್ನು ನೋಡಿದ ಅಭಿಮಾನಿಗಳು, ಸ್ನೇಹಿತರು ಹಾಗೂ ಧಾರಾವಾಹಿ ತಂಡದವರು, ಕಿರುತೆರೆ ನಟ–ನಟಿಯರು ಕಮೆಂಟ್ ಮಾಡುವ ಮೂಲಕ ಶುಭಕೋರುತ್ತಿದ್ದಾರೆ.

ಸಂಜನಾ ಬುರ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.