ನಟಿ ಸಪ್ತಮಿ ಗೌಡ
ಚಿತ್ರ: ಇನ್‌ಸ್ಟಾಗ್ರಾಮ್
ನಟಿ ಸಪ್ತಮಿ ಗೌಡ ಡಾಲಿ ಧನಂಜಯ್ ಅಭಿನಯದ ‘ಪಾಪ್ಕಾರ್ನ್ ಮಂಕಿ ಟೈಗರ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಲೀಲಾ ಪಾತ್ರದಲ್ಲಿ ನಟಿಸಿದ್ದರು.
ಲೀಲಾ ಪಾತ್ರದ ಮೂಲಕವೇ ನಟಿ ಸಪ್ತಮಿ ಗೌಡ ಜನಪ್ರಿಯತೆ ಪಡೆದುಕೊಂಡರು.
ಜೊತೆಗೆ ನಟಿ ಸಪ್ತಮಿ ಗೌಡ ಅವರಿಗೆ ಕಾಂತಾರ ಸಿನಿಮಾ ದೊಡ್ಡ ಯಶಸ್ಸು ತಂದುಕೊಟ್ಟಿತ್ತು.
ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಸಪ್ತಮಿ ಗೌಡ ಇದೀಗ ಸ್ವಿಡ್ಜರ್ಲ್ಯಾಂಡ್ನಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಪ್ತಮಿ ಗೌಡ ಬಣ್ಣ ಬಣ್ಣದ ಉಡುಪುಗಳನ್ನು ಧರಿಸಿಕೊಂಡು ಫೋಟೊಗೆ ಪೋಸ್ ಕೊಟ್ಟಿದ್ದಾರೆ. ನಟಿ ಹಂಚಿಕೊಂಡ ಚಿತ್ರಗಳು ಎಲ್ಲರ ಗಮನ ಸೆಳೆದಿದೆ.
ಸದ್ಯ ವಿದೇಶ ಪ್ರವಾಸದಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಕಣ್ಣಿಗೆ ಕನ್ನಡಕ ಹಾಕಿಕೊಂಡು ಸುಂದರವಾದ ಸರೋವರದ ದಡದಲ್ಲಿ ಕಾಂತಾರ ಬೆಡಗಿ ಮಿಂಚಿದ್ದಾರೆ.
ಕೆಂಪು ಬಣ್ಣದ ಡ್ರೆಸ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ ಸಪ್ತಮಿ ಗೌಡ.
ಸಪ್ತಮಿ ಗೌಡ ಹೊಸ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಪ್ತಮಿ ಗೌಡ ಅವರು ತುಂಡು ಬಟ್ಟೆ ಧರಿಸಿ ಪುಟ್ಟ ಹುಡುಗಿಯಂತೆ ಕುಣಿದಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.