ADVERTISEMENT

ಮಂತ್ರ ಮಾಂಗಲ್ಯದ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಸುಹಾನಾ ಸಯ್ಯದ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಅಕ್ಟೋಬರ್ 2025, 12:36 IST
Last Updated 17 ಅಕ್ಟೋಬರ್ 2025, 12:36 IST
<div class="paragraphs"><p>ಸುಹಾನಾ ಸಯ್ಯದ್ ಹಾಗೂ ನಿತಿನ್ ದಂಪತಿ</p></div>

ಸುಹಾನಾ ಸಯ್ಯದ್ ಹಾಗೂ ನಿತಿನ್ ದಂಪತಿ

   

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದುಕೊಂಡಿರುವ ಗಾಯಕಿ ಸುಹಾನಾ ಸಯ್ಯದ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಬಹುಕಾಲದ ಗೆಳೆಯ ನಿತಿನ್ ಎಂಬುವವರನ್ನು ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದಾರೆ.

ಸುಹಾನಾ ಸಯ್ಯದ್ ಹಾಗೂ ನಿತಿನ್ ದಂಪತಿ

ADVERTISEMENT

ಕುಟುಂಬಸ್ಥರ ಸಮ್ಮುಖದಲ್ಲಿ 16 ವರ್ಷದ ಗೆಳೆಯ ನಿತಿನ್ ಜೊತೆ ಸುಹಾನಾ ಸಯ್ಯದ್ ಮದುವೆಯಾಗಿದ್ದಾರೆ. ಸುಹಾನಾ ಸಯ್ಯದ್‌ರನ್ನು ವಿವಾಹವಾಗಿರುವ ನಿತಿನ್ ಕೂಡ ರಂಗಭೂಮಿ ಕಲಾವಿದರಾಗಿದ್ದಾರೆ. ಕನಕಪುರ ರಸ್ತೆ ಖಾಸಗಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಬ್ಬರು ಸರಳವಾಗಿ ಮದುವೆಯಾಗಿದ್ದಾರೆ.

ಸುಹಾನಾ ಅವರು ಈ ಹಿಂದೆಯೆ ಸಾಮಾಜಿಕ ಮಾಧ್ಯಮದಲ್ಲಿ ನಿತಿನ್‌ ಜೊತೆಗೆ ಕ್ಲಿಕ್ಕಿಸಿಕೊಂಡಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ ‘ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ. ಪ್ರೇಮಕ್ಕೆ ಯಾವ ಮಿತಿ ಇಲ್ಲ ಎಂಬುದಕ್ಕೆ ನಾವೇ ಸಾಕ್ಷಿ. ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ನಿಮ್ಮ ಆಶೀರ್ವಾದವಿರಲಿ’ ಎಂದು ಬರೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.