ADVERTISEMENT

ಡಿಸೆಂಬರ್‌ನಲ್ಲಿ ಟಿಸಿಎಲ್‌ ಶುರು: ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 5:43 IST
Last Updated 28 ಅಕ್ಟೋಬರ್ 2021, 5:43 IST
ಟಿಸಿಎಲ್‌ ತಂಡ
ಟಿಸಿಎಲ್‌ ತಂಡ   

ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ ‘ಟೆಲಿವಿಷನ್ ಕ್ರಿಕೆಟ್ ಲೀಗ್’ (ಟಿಸಿಎಲ್‌) ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ.

ಟಿಸಿಎಲ್‌ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಎಂಬ 6 ತಂಡಗಳಿರಲಿವೆ. ಕಿರುತೆರೆ ನಟ-ನಟಿಯರು ಭಾಗವಹಿಸಲಿದ್ದಾರೆ.

ದೀಪಕ್ ಹಾಗೂ ಮಂಜೇಶ್ ಸಾರಥ್ಯದಲ್ಲಿ ನಡೆಯುತ್ತಿರುವ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿಯಲ್ಲಿ 102 ಖ್ಯಾತನಾಮರು ಭಾಗಿಯಾಗಲಿದ್ದಾರೆ. ಈಗಾಗಲೇ ಎರಡು ಸೀಸನ್ಸ್ ಯಶಸ್ವಿಯಾಗಿ ಪೂರೈಸಿರುವ ಟಿಸಿಎಲ್, ಮೂರನೇ ಸೀಸನ್‌ಗೆ ಸಜ್ಜಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.