ಸಾಂದರ್ಭಿಕ ಚಿತ್ರ
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಗಳ ಬೆನ್ನಲ್ಲೇ ಕಿರುತೆರೆಯಲ್ಲೂ ಇಂತದ್ದೇ ಆರೋಪಗಳು ಕೇಳಿಬಂದಿವೆ.
ಕೇರಳದ ಇಬ್ಬರು ಕಿರುತೆರೆ ನಟರ ವಿರುದ್ಧ ಅದೇ ಧಾರಾವಾಹಿಯಲ್ಲಿ ನಟಿಸುತ್ತಿದ್ದ ನಟಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪದಡಿ ದೂರು ದಾಖಲಿಸಿದ್ದಾರೆ.
ಒಬ್ಬ ನಟ ಲೈಂಗಿಕ ದೌರ್ಜನ್ಯ ಎಸಗಿದ್ದು, ಮತ್ತೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೊಚ್ಚಿಯ ಇನ್ಫೋಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಲನಚಿತ್ರೋದ್ಯಮದಲ್ಲಿ ನಟಿಯರು ಎದುರಿಸುತ್ತಿರುವ ದೌರ್ಜನ್ಯಗಳ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯ ನಂತರ ಲೈಂಗಿಕ ದೌರ್ಜನ್ಯದ ದೂರುಗಳಿಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನಟಿ ಈ ಹಿಂದೆ ಹೇಮಾ ಸಮಿತಿಯ ಮುಂದೆ ಹೇಳಿಕೆ ನೀಡಿದ್ದರು ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.