ADVERTISEMENT

ಕೀಟ ತಜ್ಞ ಎಸ್‌.ಎಸ್‌. ಕಟಗಿಹಳ್ಳಿಮಠ್‌ ನಿಧನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 6:47 IST
Last Updated 3 ಡಿಸೆಂಬರ್ 2019, 6:47 IST
ಎಸ್‌.ಎಸ್‌. ಕಟಗಿಹಳ್ಳಿಮಠ್‌
ಎಸ್‌.ಎಸ್‌. ಕಟಗಿಹಳ್ಳಿಮಠ್‌    

ಬೆಂಗಳೂರು: ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಕೀಟ ತಜ್ಞರಾಗಿದ್ದ ಪ್ರೊ. ಎಸ್‌.ಎಸ್‌. ಕಟಗಿಹಳ್ಳಿಮಠ್‌ (101) ಅವರು ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

‘ಕೃಷಿ ಋಷಿ’ ಎಂದೇ ಪ್ರಸಿದ್ಧರಾಗಿದ್ದ ಅವರಿಗೆ ಕನ್ನಡರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಇವರು ಕೃಷಿ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ಕೃಷಿ ಕಾಲೇಜಿನಲ್ಲಿ ಕೀಟಶಾಸ್ತ್ರ ಪಾಧ್ಯಾಪರಾಗಿ ಕಾರ್ಯನಿರ್ವಹಿಸಿದ್ದ ಅವರು ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ADVERTISEMENT

ಮೃತರು ಮಕ್ಕಳು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಚಾಮರಾಜಪೇಟೆ ರುದ್ರಭೂಮಿಯಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.