ಈ ಬಾರಿ ರಾಜ್ಯಕ್ಕೆ ನೈರುತ್ಯ ಮುಂಗಾರು ಅವಧಿಗೂ ಮುನ್ನ ಕಾಲಿಟ್ಟಿದೆ. ಮುಂಗಾರು ಆಗಮನಕ್ಕೂ ಮೊದಲೇ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಕರಾವಳಿ, ಮಲೆನಾಡು ಪ್ರದೇಶ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ಮುಂದುವರಿದಿದೆ. ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳನ್ನು ಕರಾವಳಿ, ಮಲೆನಾಡು ಪ್ರದೇಶದೊಂದಿಗೆ ಬೆಸೆಯುವ ಹಲವು ಘಾಟಿ ಪ್ರದೇಶಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿವೆ. ಹಾಸನ–ದಕ್ಷಿಣ ಕನ್ನಡ ಜಿಲ್ಲೆಗಳ ನಡುವಿನ ಕೊಂಡಿಯಾಗಿರುವ ಶಿರಾಡಿ ಘಾಟಿ, ಕೊಡಗು–ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಸಂಪಾಜೆ ಘಾಟಿ ಸೇರಿದಂತೆ ಹಲವು ಘಾಟಿಗಳು ಇತ್ತೀಚಿನ ವರ್ಷಗಳಲ್ಲಿ ಪ್ರತಿ ಮಳೆಗಾಲದಲ್ಲೂ ಭೂಕುಸಿತಕ್ಕೆ ತುತ್ತಾಗುತ್ತಿವೆ. ಜೀವ ಹಾನಿ, ಆಸ್ತಿ ಹಾನಿಗೂ ಕಾರಣವಾಗುತ್ತಿವೆ. ನಾಲ್ಕೈದು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೆಲವು ಘಾಟಿಗಳಲ್ಲಿ ಭೂಕುಸಿತ ಸಂಭವಿಸಿ, ಗಿಡಮರಗಳು ಧರೆಗುರುಳಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಮಳೆಗಾಲ ಆರಂಭವಾಗಿರುವ ಈ ಹೊತ್ತಿನಲ್ಲಿ ರಾಜ್ಯದ ಪ್ರಮುಖ ಘಾಟಿಗಳ ಸದ್ಯದ ಸ್ಥಿತಿಗತಿ ಹೇಗಿದೆ ಎಂಬುದನ್ನು ಇಲ್ಲಿ ಕಟ್ಟಿಕೊಡಲಾಗಿದೆ
ಸಕಲೇಶಪುರ–ಮಾರನಹಳ್ಳಿ ನಡುವಿನ ದೊಡ್ಡ ತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ವ್ಯವಸ್ಥಿತ ಚರಂಡಿ ಮಾಡದೆ ಇರುವುದರಿಂದ ಮಳೆ ನೀರು ಹೆದ್ದಾರಿ ಮೇಲೆ ಹಳ್ಳದಂತೆ ಹರಿಯುತ್ತಿರುವುದರಿಂದ ರಸ್ತೆ ಗುಂಡಿ ಬಿದ್ದು ಸಂಚಾರಕ್ಕೆ ಸಂಚಕಾರ ಉಂಟಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.