ADVERTISEMENT

ವೇತನ ಆಯೋಗ ರಚನೆಗೆ ನೌಕರರ ಸಂಘದ ಹರ್ಷ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 15:48 IST
Last Updated 20 ನವೆಂಬರ್ 2022, 15:48 IST
ರಾಜು ಲೇಂಗಟಿ
ರಾಜು ಲೇಂಗಟಿ   

ಕಲಬುರಗಿ: ರಾಜ್ಯದ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆಗೆ ಅಧಿಕೃತ ಆದೇಶ ಹೊರಡಿಸಿದ ಸರ್ಕಾರದ ನಿರ್ಧಾರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘ ಹರ್ಷ ವ್ಯಕ್ತಪಡಿಸಿದೆ.

‘2023ನೇ ಮಾರ್ಚ್ ಅಂತ್ಯದೊಳಗೆ 7ನೇ ವೇತನ ಆಯೋಗದ ಪರಿಷ್ಕೃತ ವೇತನ ಶ್ರೇಣಿ ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆಯಿದೆ. ಇದರ ಲಾಭವನ್ನು ರಾಜ್ಯದ 6 ಲಕ್ಷ ಸರ್ಕಾರಿ ನೌಕರರು, 3.4 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ ಮತ್ತು ವಿಶ್ವವಿದ್ಯಾಲಯ ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಹಾಗೂ 4 ಲಕ್ಷ ನಿವೃತ್ತ ನೌಕರರು ಲಾಭ ಪಡೆದುಕೊಳ್ಳಲಿದ್ದಾರೆ’ ಎಂದು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೇಂಗಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT