
(ಸಾಂದರ್ಭಿಕ ಚಿತ್ರ)
ಜಗತ್ತಿನಾದ್ಯಂತ ಪ್ರತೀ ವರ್ಷ ಫೆಬ್ರುವರಿ 10ರಂದು 'ವಿಶ್ವ ದ್ವಿದಳ ಧಾನ್ಯಗಳ ದಿನ'ವನ್ನು ಆಚರಿಸಲಾಗುತ್ತದೆ. ಅವುಗಳಲ್ಲಿನ (ದ್ವಿದಳ ಧಾನ್ಯಗಳ) ಪೌಷ್ಟಿಕಾಂಶಗಳ ಮತ್ತು ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಇದರ ಉದ್ದೇಶ.
ದ್ವಿದಳ ಧ್ಯಾನಗಳು ಹೆಚ್ಚಿನ ಪ್ರೋಟೀನ್ ಅಂಶಗಳನ್ನು ಹೊಂದಿವೆ. ಜತೆಗೆ ಫೈಬರ್, ಜೀವಸತ್ವಗಳು (ವಿಟಮಿನ್ ಬಿ, ಫೋಲೇಟ್) ಮತ್ತು ಖನಿಜಗಳ (ಕಬ್ಬಿಣ, ಸತು, ಮೆಗ್ನೀಸಿಯಮ್) ಸಮೃದ್ಧ ಮೂಲಗಳಾಗಿವೆ. ಇವು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು, ಮಧುಮೇಹ ನಿಯಂತ್ರಣ, ರಕ್ತದೊತ್ತಡ ನಿಯಂತ್ರಣ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ತೂಕ ನಿರ್ವಹಣೆಗೆ ಸಹಕಾರಿಯಾಗಿವೆ.
ದ್ವಿದಳ ಧಾನ್ಯಗಳು ಯಾವುವು?
ವಿವಿಧ ಬಗೆಯ ಬೀನ್ಸ್
ಬೇಳೆ ಕಾಳುಗಳು
ಮಸೂರ್: ಹೆಸರು, ತೊಗರಿ, ಕಡಲೆ, ಅಲಸಂದಿ
ಬಟಾಣಿ ಹಸಿರು ಬಟಾಣಿ, ಒಣ ಬಟಾಣಿ.
ಕಡಲೆಕಾಯಿ
ದ್ವಿದಳ ಧಾನ್ಯಗಳ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು
ದ್ವಿದಳ ಧಾನ್ಯಗಳಲ್ಲಿ ಹೆಚ್ಚಿನ ಪ್ರೋಟೀನ್ ಅಂಶಗಳಿದ್ದು, ದೇಹಕ್ಕೆ ಅಗತ್ಯವಾದ ಅಮೈನೋ ಆಮ್ಲಗಳನ್ನು ಒದಗಿಸುತ್ತವೆ. ವಿಶೇಷವಾಗಿ ಸಸ್ಯಾಹಾರಿಗಳು ಅಥವಾ ಮಾಂಸ ಸೇವನೆಯನ್ನು ಮಿತಿಗೊಳಿಸಲು ಬಯಸುವ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ದ್ವಿದಳ ಧಾನ್ಯಗಳು ಕಡಿಮೆ ಕೊಬ್ಬಿನ ಅಂಶ, ಹೆಚ್ಚಿನ ಫೈಬರ್ ಮತ್ತು ಸಮೃದ್ಧವಾದ ಉತ್ಕರ್ಷಣ ನಿರೋಧಕ ಶಕ್ತಿ ಇದ್ದು, ಅವು ಹೃದಯದ ಆರೋಗ್ಯವನ್ನು ಸುಧಾರಿಸುತ್ತವೆ. ಜತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜತೆಗೆ ಅವುಗಳಲ್ಲಿರುವ ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಅಂಶ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ದ್ವಿದಳ ಧಾನ್ಯಗಳ ನಿಯಮಿತ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ.
ಹೆಚ್ಚಿನ ಫೈಬರ್ ಮತ್ತು ಪ್ರೋಟೀನ್ ಅಂಶದಿಂದಾಗಿ, ಇವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡಿ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತವೆ.
ಇವುಗಳಲ್ಲಿರುವ ಫೈಬರ್ ಅಂಶ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.
ಇವುಗಳಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಮತ್ತು ಫೈಟೊಕೆಮಿಕಲ್‌ಗಳು ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳು ಮೂಳೆಗಳು ಮತ್ತು ಸ್ನಾಯುಗಳ ಆರೋಗ್ಯಕ್ಕೆ ಅಗತ್ಯವಾಗಿವೆ.
ದ್ವಿದಳ ಧಾನ್ಯಗಳು ಕಾರ್ಬೋಹೈಡ್ರೇಟ್‌ಗಳು ಮತ್ತು ಕಬ್ಬಿಣದ ಅಂಶ ಎರಡನ್ನೂ ಒಳಗೊಂಡಿರುತ್ತವೆ. ಇದು ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಮತ್ತು ಆಯಾಸ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ದ್ವಿದಳ ಧಾನ್ಯಗಳನ್ನು ಯಾವುದೇ ರಾಸಾಯನಿಕ ಅಥವಾ ಕೀಟನಾಶಕಗಳನ್ನು ಬಳಸದೆ ಸಾವಯವ ಕೃಷಿ ತಂತ್ರಗಳು ಮತ್ತು ವಿಧಾನಗಳನ್ನು ಬಳಸಿ ಬೆಳೆಯಲಾಗುತ್ತದೆ. ಆದ್ದರಿಂದ ಇವು ಸುಸ್ಥಿರ ಮತ್ತು ಪರಿಸರ ಸ್ನೇಹಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.