ADVERTISEMENT

ವರ್ಷಕ್ಕೆ 80 ಸಾವಿರ ಮಂದಿಗೆ ಪಾರ್ಶ್ವವಾಯು: ನಿಮ್ಹಾನ್ಸ್ ನಿರ್ದೇಶಕ ಗುರುರಾಜ್‌

ಚಿಕಿತ್ಸೆಯ ಬಗ್ಗೆ ವೈದ್ಯರಿಗೆ ಅಗತ್ಯ ತರಬೇತಿ * ನಿಮ್ಹಾನ್ಸ್ ನಿರ್ದೇಶಕ ಡಾ.ಡಿ. ಗುರುರಾಜ್ ಮಾಹಿತಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 19:23 IST
Last Updated 6 ನವೆಂಬರ್ 2020, 19:23 IST
paralysis stroke
paralysis stroke   

ಬೆಂಗಳೂರು: ‘ರಾಜ್ಯದಲ್ಲಿ ಪ್ರತಿ ವರ್ಷ 70ರಿಂದ 80 ಸಾವಿರ ಜನರು ಪಾರ್ಶ್ವವಾಯು ಪೀಡಿತರಾಗುತ್ತಿದ್ದಾರೆ’ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕ ಡಾ.ಡಿ. ಗುರುರಾಜ್ ತಿಳಿಸಿದರು.

‘ವಿಶ್ವ ಪಾರ್ಶ್ವವಾಯು ದಿನ’ದ ಪ್ರಯುಕ್ತ ಆರೋಗ್ಯ ಇಲಾಖೆ ಹಾಗೂ ನಿಮ್ಹಾನ್ಸ್‌ ಜಂಟಿಯಾಗಿ ನಗರದಲ್ಲಿ ಆಯೋಜಿಸಿದ ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ನಿರ್ವಹಣೆ ಕುರಿತು ವೈದ್ಯರು ಹಾಗೂ ನರ್ಸ್‌ಗಳಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

‘ರಾಜ್ಯದಲ್ಲಿ ಸದ್ಯ 6 ಲಕ್ಷ ಮಂದಿ ಪಾರ್ಶ್ವವಾಯು ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.