ADVERTISEMENT

ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್‌ ವೈದ್ಯರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2021, 8:06 IST
Last Updated 22 ಮೇ 2021, 8:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ಹೇಳಿದ್ದಾರೆ.

ಆದರೆ, ಈ ಶಿಲೀಂಧ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಪ್ಪು ಶಿಲೀಂಧ್ರವು ಶ್ವಾಸಕೋಶಕ್ಕೆ ಪ್ರವೇಶಿಸಬಹುದು. ಆದರೆ, ಆ ಸಾಧ್ಯತೆಗಳು ತುಂಬಾ ಕಡಿಮೆ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ದೇಹವು ಅದರ ವಿರುದ್ಧ ಹೋರಾಡಲು ಸಮರ್ಥವಾಗಿರುತ್ತದೆ ಎಂದು ಏಮ್ಸ್‌ನ ಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್ ವಿಭಾಗದ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.