
ಅಂಚೂರ
ಚಿತ್ರ ಕೃಪೆ: ಗೆಟ್ಟಿ
ಅಂಜೂರ ನೈಸರ್ಗಿಕವಾಗಿ ಹೆಚ್ಚು ಪೋಷಕಾಂಶ ಭರಿತವಾದ ಹಣ್ಣು. ಇದು ನಾರಿನಂಶ, ಪೊಟ್ಯಾಸಿಯಂ ಹಾಗೂ ವಿಟಮಿನ್‌ಗಳಿಂದ ಸಮೃದ್ದವಾಗಿದೆ. ಅಂಜೂರ ಸೇವನೆಯಿಂದ ದೇಹಕ್ಕೆ ಅನೇಕ ಲಾಭಗಳಿವೆ. ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಅಂಚೂರವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಕರುಳಿನ ಆರೋಗ್ಯಕ್ಕೂ ಸಹಕಾರಿಯಾಗಿದೆ ಎನ್ನುತ್ತಾರೆ ವೈದ್ಯರು.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಅಂಜೂರದಲ್ಲಿ ನಾರಿನಂಶ ಹೆಚ್ಚಿರುತ್ತದೆ. ನೆನೆಸಿದ ಅಂಚೂರವನ್ನು ಬೆಳಿಗ್ಗೆ ಎದ್ದ ತಕ್ಷಣ ಸೇವಿಸುವುದರಿಂದ ಕರುಳಿನ ಆರೋಗ್ಯ ಕಾಪಾಡುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯಲ್ಲಿ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಕಾರಿಯಾಗುತ್ತದೆ.
ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ
ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ
ಅಂಜೂರದಲ್ಲಿ ಪೊಟ್ಯಾಸಿಯಂ, ಮೆಗ್ನೀಸಿಯಂಗಳು ಸಮೃದ್ದವಾಗಿರುತ್ತವೆ. ಇವು ರಕ್ತದೊತ್ತಡವನ್ನು ಕಡಿಮೆ ಮಾಡುವುದರ ಜತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿಡಲು ಸಹಕಾರಿಯಾಗಿವೆ. ಹೃದಯದ ರಕ್ಕನಾಳಗಳ ಆರೋಗ್ಯಕ್ಕೂ ಸಹಕಾರಿಯಾಗಲಿದೆ ಎನ್ನುತ್ತಾರೆ ವೈದ್ಯರು.
ಮೂಳೆಗಳ ಬಲ ಹೆಚ್ಚಿಸುತ್ತದೆ
ಮೂಳೆಗಳ ಬಲ ಹೆಚ್ಚಿಸುತ್ತದೆ
ಅಂಜೂರದಲ್ಲಿರುವ ಕ್ಯಾಲ್ಸಿಯಂ ಮತ್ತು ರಂಜಕ ಮೂಳೆ ಸಧೃಡವಾಗಿಡಲು ಸಹಕಾರಿಯಾಗಿವೆ. ಮೂಳೆಗಳನ್ನು ದುರ್ಬಲಗೊಳಿಸುವ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವೃದ್ದರು ಹಾಗೂ ಮಹಿಳೆಯರಿಗೆ ಈ ಹಣ್ಣು ಬಹುಪಯೋಗಿಯಾಗಿದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಅಂಜೂರವು ವಿಟಮಿನ್ ಎ, ಸಿ ಮತ್ತು ಕೆ ನಂತಹ ಜೀವಸತ್ವಗಳನ್ನು ಹೊಂದಿದೆ. ಇದರಲ್ಲಿ ಕಬ್ಬಿಣ ಮತ್ತು ತಾಮ್ರ ಸೇರಿದಂತೆ ಇತರೆ ಖನಿಜಗಳೂ ಸಮೃದ್ಧವಾಗಿವೆ. ಇವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.