ADVERTISEMENT

ಶೇ 30ರಷ್ಟು ಮಹಿಳೆಯರು ಸಂಗಾತಿಯಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ: WHO ವರದಿ

ಪಿಟಿಐ
Published 22 ನವೆಂಬರ್ 2025, 12:41 IST
Last Updated 22 ನವೆಂಬರ್ 2025, 12:41 IST
   

ಭಾರತದಲ್ಲಿ 15 ರಿಂದ 49 ವರ್ಷ ವಯಸ್ಸಿನ ಮಹಿಳೆಯರು ಶೇ ಐದನೇ ಒಂದು ಭಾಗದಷ್ಟು ತಮ್ಮ ಸಂಗಾತಿಯಿಂದ ಹಿಂಸಾಚಾರಕ್ಕೆ ಒಳಗಾಗಿದ್ದಾರೆ ಎಂದು 2023ರ ವರದಿಯೊಂದು ಬಹಿರಂಗಪಡಿಸಿದೆ. ಅಮೆರಿಕದ ಶೇ 30ರಷ್ಟು ಮಹಿಳೆಯರು ತಮ್ಮ ಜೀವಿತಾವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಮಾಡಿದೆ. 

ಪ್ರಪಂಚದ ಒಟ್ಟು ಜನರ ಪೈಕಿ ಶೇ ಮೂರರಲ್ಲಿ ಒಬ್ಬರು ತನ್ನ ಸಂಗಾತಿಯಿಂದ ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಅದರಂತೆ 15 ರಿಂದ 49 ವರ್ಷ ವಯಸ್ಸಿನ ಮಹಿಳೆಯರಲ್ಲಿ ಶೇ 8.4 ರಷ್ಟು ಸಂಗಾತಿ ಹೊರತುಪಡಿಸಿ ಇತರರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ಭಾರತದಲ್ಲಿ 15 ವರ್ಷ‌ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಶೇ 4 ರಷ್ಟು ಮಹಿಳೆಯರು ತಮ್ಮ ಸಂಗಾತಿಯಲ್ಲದವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ADVERTISEMENT

‘ಮಹಿಳೆಯರ ಮೇಲಿನ ದೌರ್ಜನ್ಯವು ಮಾನವೀಯತೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಇದರ ವಿರುದ್ದ ಕ್ರಮ ಕೈಗೊಳ್ಳದಿರುವುದು ಕಳವಳಕಾರಿ ಸಂಗತಿ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಟ್ರೊಸ್ ಅಧಾನೊಮ್ ಫೆಬ್ರೆಯೆಸಸ್ ಹೇಳಿದ್ದಾರೆ’.

‘2030ರ ವೇಳೆಗೆ ಮಹಿಳೆಯರು ಮತ್ತು ಯುವತಿಯರ ಹಿಂಸಾಚಾರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸುವುದು ಸುಲಭವಲ್ಲ’ ಎಂದು ಅವರು ಹೇಳಿದರು. 

ಸದ್ಯ ಬಿಡುಗಡೆಯಾಗಿರುವ ಅಧ್ಯಯನದ ಪ್ರಕಾರ ಮಹಿಳೆಯರನ್ನು ಲೈಂಗಿಕ ದೌರ್ಜನ್ಯ ಅಥವಾ ಇತರೆ ಹಿಂಸಾಚಾರಗಳಿಂದ ತಪ್ಪಿಸುವ ಉಪಕ್ರಮಗಳಲ್ಲಿ ಕುಸಿತವಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.