ADVERTISEMENT

ಇಂದು ವಿಶ್ವ ಹೃದಯ ದಿನ: ಹೃದ್ರೋಗ ಸಾವಿನ ಪ್ರಮಾಣ ಶೇ 26

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 1:56 IST
Last Updated 29 ಸೆಪ್ಟೆಂಬರ್ 2020, 1:56 IST
   

ಬೆಂಗಳೂರು: ದೇಶದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳಿಂದ ಶೇ 63 ಸಾವುಗಳು ಸಂಭವಿಸುತ್ತಿದ್ದರೆ, ಇವುಗಳಲ್ಲಿ ಹೃದಯದ ಕಾಯಿಲೆಗಳಿಂದ ಸಾವಿಗೀಡಾಗುವವರ ಪ್ರಮಾಣ ಶೇ 26ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ವಿಶ್ವ ಹೃದಯ ದಿನದ ನಿಮಿತ್ತ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪ್ರಕಟಿಸಿರುವ ಇಲಾಖೆ, ‘ಆರೋಗ್ಯ ಶಿಕ್ಷಣ ಮತ್ತು ಜೀವನಶೈಲಿ ಬದಲಾವಣೆ ಹಾಗೂ ಚಿಕಿತ್ಸೆ ಮೂಲಕ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲಾಗುತ್ತಿದೆ’ ಎಂದು ಹೇಳಿದೆ.

‘ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಪಾರ್ಶ್ವವಾಯು ಮೊದಲಾದ ಸಾಂಕ್ರಾಮಿಕವಲ್ಲದ ರೋಗಗಳಿಂದ ಸಂಭವಿಸುತ್ತಿರುವ ಅಕಾಲಿಕ ಮರಣ ಪ್ರಮಾಣವನ್ನು 2030ರ ವೇಳೆಗೆ ಶೇ 33ರಷ್ಟು ಕಡಿಮೆಗೊಳಿಸುವ ಗುರಿ ನಿಗದಿಪಡಿಸಲಾಗಿದೆ’ ಎಂದು ಇಲಾಖೆ ತಿಳಿಸಿದೆ.

ADVERTISEMENT

‘ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 273 ಎನ್‌ಸಿಡಿ ಕ್ಲಿನಿಕ್‌ಗಳು (ಸಾಂಕ್ರಾಮಿಕವಲ್ಲದ ರೋಗಗಳಿಗೆ ಚಿಕಿತ್ಸೆ ನೀಡುವ ಕ್ಲಿನಿಕ್‌ಗಳು) ಕಾರ್ಯನಿರ್ವಹಿಸುತ್ತಿವೆ. ಇನ್ನೂ 104 ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದ ಎನ್‌ಸಿಡಿ ಕ್ಲಿನಿಕ್‌ಗಳಿಗೆ 2019–29ನೇ ಸಾಲಿನಲ್ಲಿ ಅನುಮೋದನೆ ನೀಡಲಾಗಿದ್ದು, ಮೂಲಸೌಕರ್ಯ ಕಲ್ಪಿಸುವ ಹಂತದಲ್ಲಿದೆ’ ಎಂದು ಮಾಹಿತಿ ನೀಡಿದೆ.

‘ಪ್ರಸಕ್ತ ವರ್ಷದಲ್ಲಿ ಮಧುಮೇಹ ಚಿಕಿತ್ಸಾ ಕ್ರಮವನ್ನು ರಾಜ್ಯದಾದ್ಯಂತ ಅನುಷ್ಠಾನಕ್ಕೆ ತರಲಾಗುವುದು’ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.