ADVERTISEMENT

ಕಾರಂತರ ನೆನಪಿನಲ್ಲಿ...

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2012, 22:00 IST
Last Updated 9 ಡಿಸೆಂಬರ್ 2012, 22:00 IST

ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯು ತನ್ನ 6ನೇ ವಾರ್ಷಿಕೋತ್ಸವದ ಅಂಗವಾಗಿ ಕಡಲತೀರದ ಭಾರ್ಗವ ಡಾ. ಕೆ. ಶಿವರಾಮ ಕಾರಂತ ಸ್ಮರಣಾರ್ಥ ಆಯೋಜಿಸಿದ್ದ `ಕಾರಂತರ ನೆನಪು-2012' ಸಾಂಸ್ಕೃತಿಕ ಉತ್ಸವ ಈಚೆಗೆ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಿತು.

ಕನ್ನಡ ನಾಡು ನುಡಿಗಾಗಿ ಸೇವೆಸಲ್ಲಿಸುತ್ತಿರುವ ಕಟೀಲಿನ ವೇ.ಲಕ್ಷ್ಮೀನಾರಾಯಣ ಆಸ್ರಣ್ಣ, ಯುವ ಬರಹಗಾರ ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದ ಸಾಧಕರಿಗೆ 2012ನೇ ಸಾಲಿನ ಡಾ. ಕೆ. ಶಿವರಾಮ ಕಾರಂತ ಸದ್ಭಾವನಾ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಂಠೀರವ ಸ್ಟುಡಿಯೋ ನಿರ್ದೇಶಕ ಕೆ.ಮೋಹನ್‌ದೇವ್ ಆಳ್ವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಹಿರಿಯ ಚಲನಚಿತ್ರ ಸಾಹಿತಿ ಮತ್ತು ನಿರ್ದೇಶಕ ಸಿ.ವಿ. ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಯಕ್ಷಗಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೋಹಕವಾಗಿದ್ದವು.

ವೇದಿಕೆಯ ರಾಜ್ಯಾಧ್ಯಕ್ಷ ಕೆಂಚನೂರು ಶಂಕರ, ದೂರದರ್ಶನ ಕೇಂದ್ರದ ಹೆಚ್ಚುವರಿ ಉಪ ಮಹಾನಿರ್ದೇಶಕ ಡಾ. ಮಹೇಶ ಜೋಶಿ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪುಂಡಲಿಕ ಹಾಲಂಬಿ, ನಾಟಕ ಅಕಾಡೆಮಿ ಅಧ್ಯಕ್ಷೆ ಮಾಲತಿ ಸುಧೀರ್ ಹಾಗೂ ಅಂತರರಾಷ್ಟ್ರೀಯ ಖ್ಯಾತ ಚಿತ್ರ ಕಲಾಕಾರರಾದ ಕಲಾಕಸ್ತೂರಿ ಮೀರಾಕುಮಾರ್ ಭಾಗವಹಿಸಿದ್ದರು. ್ಢ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.