ADVERTISEMENT

ಫ್ರಾನ್ಸ್ ಅನೆಸ್ಸಿ ಸಭೆಗೆ ನಗರದ ಅನಿಮೇಷನ್ ಇಂಡಸ್ಟ್ರೀಸ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 19:59 IST
Last Updated 14 ಜೂನ್ 2013, 19:59 IST

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ 37ನೇ ಅನೆಸ್ಸಿ ಜಾಗತಿಕ ಅನಿಮೇಷನ್ ಒಕ್ಕೂಟದ ಸಭೆಯಲ್ಲಿ ಬೆಂಗಳೂರು ಅನಿಮೇಷನ್ ಇಂಡಸ್ಟ್ರೀಸ್ ಭಾಗವಹಿಸಿದೆ. 37 ವರ್ಷಗಳಿಂದ ನಡೆಯುತ್ತಿರುವ ಅನೆಸ್ಸಿ ಸಭೆಯಲ್ಲಿ ವಿವಿಧ ಕಲಾವಿದರು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ 500ಕ್ಕೂ ಹೆಚ್ಚು ಅನಿಮೇಷನ್ ಚಿತ್ರಗಳನ್ನು ಎಂಟು ಸಿನಿಮಾ ಮಂದಿರಗಳಲ್ಲಿ ಪ್ರದರ್ಶಿಸಲಿದ್ದಾರೆ.ಅನಿಮೇಷನ್, ವಿಷುಯಲ್ ಎಫೆಕ್ಟ್ , ಗೇಮಿಂಗ್ ಮತ್ತು ಕಾಮಿಕ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಉತ್ತಮ ಬೆಂಬಲ ಮತ್ತು ಪ್ರೋತ್ಸಾಹ ನೀಡಲು ಇದೊಂದು ಸೂಕ್ತ ವೇದಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT