ADVERTISEMENT

ಮೈಲಾರಪ್ಪ `ಹೋರಾಟದ ಒಂದು ನೋಟ'

​ಪ್ರಜಾವಾಣಿ ವಾರ್ತೆ
Published 21 ಜೂನ್ 2013, 19:59 IST
Last Updated 21 ಜೂನ್ 2013, 19:59 IST

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಆಶ್ರಯದಲ್ಲಿ ಭಾನುವಾರ (ಜೂ.23)ಬೆಳಿಗ್ಗೆ 10.30ಕ್ಕೆ ಹುತಾತ್ಮ ಮೈಲಾರ ಮಹದೇವಪ್ಪ ದತ್ತಿ ಕಾರ್ಯಕ್ರಮದಲ್ಲಿ `ಹೋರಾಟದ ಒಂದು ನೋಟ' ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಗ್ರಾಮೀಣಾವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಉದ್ಘಾಟಿಸುವರು. ನಾಡೋಜ ಡಾ.ಪಾಟೀಲ ಪುಟ್ಟಪ್ಪ ಆಶಯ ಭಾಷಣ ಮಾಡುವರು. ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಹೋರಾಟದ ಒಂದು ನೋಟ ಪುಸ್ತಕ ಬಿಡುಗಡೆ ಮಾಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು ಅವರು ಲೇಖಕಿ ಸಂಕಮ್ಮ ಅವರನ್ನು ಸನ್ಮಾನಿಸುವರು.

ಮೈಲಾರ ಮಹದೇವ ಪ್ರಶಸ್ತಿಯನ್ನು ದೂರದರ್ಶನ ಕೇಂದ್ರದ ಹಿರಿಯ ಉಪ ನಿರ್ದೇಶಕ ಡಾ.ಮಹೇಶ್ ಜೋಷಿ ಪ್ರದಾನ ಮಾಡವರು. ಮುಖ್ಯ ಅತಿಥಿಗಳಾಗಿ ಹಾವೇರಿ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ್, ವಿಧಾನ ಸಭೆಯ ಮಾಜಿ ಸಭಾಧ್ಯಕ್ಷ ಬಿ.ಜಿ.ಬಣಗಾರ್, ಡಾ.ಮನು ಬಳಿಗಾರ್ ಮತ್ತು ಮೈಲಾರ ಮಹದೇವಪ್ಪ ಅವರ ಪುತ್ರಿ ಕಸ್ತೂರಮ್ಮ ಭಾಗವಹಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.