ADVERTISEMENT

ವಿದ್ಯಾರ್ಥಿವೇತನ - ಪ್ರತಿಭೆಗೆ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಬನಶಂಕರಿಯ ಬಿಎನ್‌ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳ ಸ್ವಾಗತ ಮತ್ತು ಆರ್ಥಿಕ ಸಾಮಾಜಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಣೆ ನಡೆಯಿತು.

ರಾಜ್ಯ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಇ. ವೆಂಕಟಯ್ಯ,  ಶಿಕ್ಷಣ ತಜ್ಞ ಡಾ ಅಲಿ ಕ್ವಾಜಾ ಮತ್ತು ಬಿಎನ್‌ಎಂ ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ ಎಲ್ ರಾಜಣ್ಣ ಮತ್ತಿತರರು ಹಾಜರಿದ್ದರು.

`ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಎಲ್ಲರಿಗೂ ವಿದ್ಯೆ ದೊರಕಿಸುವುದು. ಏಕೆಂದರೆ ವಿದ್ಯಾ ದಾನ ಶ್ರೇಷ್ಠ ದಾನ. ಅದಕ್ಕಾಗಿ  ಬದಲಾಗುತ್ತಿರುವ ವಿಶ್ವಕ್ಕೆ ಅನುಗುಣವಾದ ಗುಣಮಟ್ಟದ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತಿದೆ~ ಎಂದು ಕಾಲೇಜಿನ ನಿರ್ದೇಶಕ ಪ್ರೊ. ಟಿ.ಜೆ ರಾಮಮೂರ್ತಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.