ADVERTISEMENT

ಎಂಸ್ಯಾಂಡ್‌ನಲ್ಲಿ ಬಚ್ಚಿಟ್ಟಿದ ₹ 50 ಲಕ್ಷ ವಶ

​ಪ್ರಜಾವಾಣಿ ವಾರ್ತೆ
Published 10 ಮೇ 2023, 7:40 IST
Last Updated 10 ಮೇ 2023, 7:40 IST
50 ಲಕ್ಷ ನಗದನ್ನು ವಶಪಡಿಸಿಕೊಂಡ ಚುನಾವಣಾ ಸಿಬ್ಬಂದಿ.
50 ಲಕ್ಷ ನಗದನ್ನು ವಶಪಡಿಸಿಕೊಂಡ ಚುನಾವಣಾ ಸಿಬ್ಬಂದಿ.   

ಎಚ್.ಡಿ.ಕೋಟೆ: ತಾಲ್ಲೂಕಿನ ಸವ್ವೆ ಬಳಿಯ ತೋಟದ ಮನೆಯಲ್ಲಿದ್ದ ಲಾರಿಯಲ್ಲಿ ತುಂಬಿದ್ದ ಎಂಸ್ಯಾಂಡ್‌ನಲ್ಲಿ ಮುಚ್ಚಿಟ್ಟಿದ್ದ ₹ 50 ಲಕ್ಷ ನಗದನ್ನು ಸಹಾಯಕ ಚುನಾವಣಾ ಅಧಿಕಾರಿ ಕುಮುದಾ ಶರತ್ ನೇತೃತ್ವದಲ್ಲಿ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡರು.

‘ಚುನಾವಣೆಗೆ ಹಂಚಲು ಹಣವನ್ನು ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ತಾಲ್ಲೂಕು ಖಜಾನೆಗೆ ಒಪ್ಪಿಸಲಾಗಿದೆ’ ಎಂದು ಅವರು ತಿಳಿಸಿದರು. ತಹಶೀಲ್ದಾರ್ ಪಿ.ಎನ್.ಮಹೇಶ್ ಇದ್ದರು. ಸ್ಥಳದಲ್ಲಿ ಅಕ್ಕಪಕ್ಕದ ಗ್ರಾಮಸ್ಥರು ನೆರೆದಿದ್ದರಿಂದ ಬಿಗುವಿನ ವಾತಾವರಣ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT