ADVERTISEMENT

ಕೊರೊನಾ ವೈರಸ್‌ಗೆ ರಾಜ್ಯದಲ್ಲಿ ಮತ್ತೊಂದು ಬಲಿ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 14:50 IST
Last Updated 27 ಏಪ್ರಿಲ್ 2020, 14:50 IST
   

ಬೆಂಗಳೂರು: ಜಗತ್ತನ್ನೇ ಆವರಿಸುವ ಮಹಾಮಾರಿ ಕೊರೊನಾ ವೈರಸ್‌ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ.

ಆಳಂದದ 57 ವರ್ಷದ ವ್ಯಕ್ತಿಯೊಬ್ಬರು ಇಂದು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ಸೋಮವಾರ 20ಕ್ಕೆ ಏರಿಕೆಯಾಗಿದೆ.

ಇನ್ನು ಈ ಕುರಿತು ಟ್ವೀಟ್‌ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌, ರಾಜ್ಯದಲ್ಲಿ ಕೋವಿಡ್–19 ಸೋಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. 57ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕೊರೋನಾ ಸೋಂಕು ಪತ್ತೆಯಾಗಿತ್ತು. ಉಸಿರಾಟದ ತೊಂದರೆಯಿಂದ ಕಲಬರ್ಗಿಯ ಜಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಯಕೃತ್ತಿನ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇದರೊಂದಿಗೆ ಕಲ್ಬುರ್ಗಿ ಜಿಲ್ಲೆಯಲ್ಲಿ ಕೋವಿಡ್‌ಗೆ ಒಟ್ಟು 5 ಬಲಿಯಾಗಿದೆ,’ ಎಂದಿದ್ದಾರೆ.

ADVERTISEMENT

ಸದ್ಯ ರಾಜ್ಯದಲ್ಲಿ 512 ಮಂದಿಗೆ ಸೋಂಕು ತಗುಲಿದ್ದು, 20 ಜನ ಮೃತಪಟ್ಟಿದ್ದಾರೆ. 193 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.