ಸುಳ್ಳು:
ಕೇಂದ್ರ ಸಚಿವ ಸಂಪುಟವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ‘ಈ ಶಿಕ್ಷಣ ನೀತಿಯ ಅನ್ವಯ, ಈ ಬಾರಿಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇರುವುದಿಲ್ಲ’ ಎಂಬ ಬರಹವುಳ್ಳ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಶಿಕ್ಷಣ ಸಚಿವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.
ಸತ್ಯ:
ಬೋರ್ಡ್ ಪರೀಕ್ಷೆ ರದ್ದತಿ ಕುರಿತು ಹರಿದಾಡುತ್ತಿರುವ ಸಂದೇಶ ಸುಳ್ಳು ಎಂದು ಪಿಐಬಿಫ್ಯಾಕ್ಟ್ಚೆಕ್ವೇದಿಕೆ ತಿಳಿಸಿದೆ. ಬೋರ್ಡ್ ಪರೀಕ್ಷೆ ರದ್ದುಗೊಳಿಸಿರುವ ಕುರಿತಂತೆ ಶಿಕ್ಷಣ ಇಲಾಖೆಯು ಸದ್ಯಕ್ಕೆ ಯಾವುದೇ ಆದೇಶ ಹೊರಡಿಸಿಲ್ಲ. ಎನ್‌ಇಪಿ ಅಡಿಯಲ್ಲಿ 10ನೇ ತರಗತಿ ಪರೀಕ್ಷೆ ಮುಂದುವರಿಯುವುದಿಲ್ಲ ಎಂಬ ಸುದ್ದಿಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.